ಸಂಪುಟ ಪುನರಚನೆ ವೇಳೆ ನನಗೆ ಸಚಿವ ಸ್ಥಾನ ಕೊಡಲೇಬೇಕು- ಮಂತ್ರಿಗಿರಿಗೆ ಮತ್ತೊಬ್ಬ ಶಾಸಕ ಡಿಮ್ಯಾಂಡ್

ಚಿಕ್ಕಬಳ್ಳಾಪುರ,ಡಿಸೆಂಬರ್,6,2024 (www.justkannada.in ಸಚಿವ ಸಂಪುಟ ಪುನರಚನೆ ವಿಚಾರಕ್ಕೆ ಸದ್ಯ‍ಕ್ಕೆ ಬ್ರೇಕ್ ಬಿದ್ದಿದ್ದು ಈ ಮಧ್ಯೆ ಮತ್ತೊಬ್ಬ ಕಾಂಗ್ರೆಸ್ ಶಾಸಕ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.

ನನಗೆ ಸಚಿವ ಸ್ಥಾನ ಕೇಳುವ ಹಕ್ಕಿದೆ, ನಾನು ಹಿರಿಯ ಶಾಸಕ, ಮುಂದಿನ ಬಾರಿ ಸಚಿವ ಸಂಪುಟ ಪುನಾರಚನೆ ವೇಳೆ ನನಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಡಿಮ್ಯಾಂಡ್ ಮಾಡುತ್ತೇನೆ ಎಂದು ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ  ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಸುಬ್ಬಾರೆಡ್ಡಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ, ಚಿಂತಾಮಣಿ, ಗೌರಿಬಿದನೂರು, ಎಲ್ಲಾ ಕ್ಷೇತ್ರದವರೂ ಸಚಿವರಾಗಿದ್ದಾರೆ. ಆದರೆ ಇದುವರೆಗೂ ಬಾಗೇಪಲ್ಲಿಗೆ ಸಚಿವ ಸ್ಥಾನ ಸಿಕ್ಕಿಲ್ಲ.  ಅಪರೇಷನ್ ಕಮಲದ ವೇಳೆ ಬಿಜೆಪಿಯವರು ನನಗೆ ಸಚಿವ ಸ್ಥಾನದ ಆಫರ್  ನೀಡಿದ್ದರು. ಆದರೆ ನಾನು  ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದ ಇದ್ದೆ. ಹೀಗಾಗಿ ಸಚಿವ ಸಂಪುಟ ಪುನರಚನೆ ವೇಳೆ  ನನಗೆ ಸಚಿವ ಸ್ಥಾನ ಕೊಡಲೇಬೇಕು. ಸಿಎಂ ಮತ್ತು ಡಿಸಿಎಂ ನನಗೆ ಸಚಿವ ಸ್ಥಾನ ನೀಡುವ ಭರವಸೆ ಇದೆ ಎಂದು ಸುಬ್ಬಾರೆಡ್ಡಿ ತಿಳಿಸಿದ್ದಾರೆ.

Key words: ministerial position, MLA, demands