ಬೆಂಗಳೂರು,ಫೆ,5,2020(www.justkannada.in): ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಈ ವೇಳೆ 10 ನೂತನ ಶಾಸಕರು ಹಾಗೂ ಮೂವರು ಮೂಲ ಬಿಜೆಪಿಗರು ಸಚಿವರಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಅಧಿವೇಶನ ಮುಗಿಯವವರೆಗೂ ಮೂಲಬಿಜೆಪಿಗರಿಗೆ ಸಚಿವ ಸ್ಥಾನ ನೀಡದಿರಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಳೆ ಹತ್ತು ಮಂದಿ ಅರ್ಹ ಶಾಸಕರು ಮಾತ್ರ ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ಹೇಳಲಾಗುತ್ತಿದೆ. ಮೂಲ ಬಿಜೆಪಿಗರಿಗೆ ಈಗ ಸಚಿವ ಸ್ಥಾನ ನೀಡಿದರೇ ಇತರೆ ಆಕಾಂಕ್ಷಿಗಳು ಬಂಡಾಯವೇಳುವ ಸಾಧ್ಯತೆ ಇದೆ. ಸಿ.ಪಿ ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡಲು ವಿರೋಧ ವ್ಯಕ್ತಪಡಿಸಿ ಮೂಲಬಿಜೆಪಿ ಕೆಲ ಶಾಸಕರು ಸಭೆ ನಡೆಸಿದ್ದು ಹೀಗಾಗಿ ಶಾಸಕರು ಬಂಡಾಯವೇಳುವ ಸಾಧ್ಯತೆ ಇದೆ. ಈ ಹಿನ್ನೆಲೆ ಬಿಜೆಪಿ ಹೈಕಮಾಂಡ್ ಈ ತೀರ್ಮಾನ ಕೈಗೊಂಡಿದೆ ಎನ್ನಲಾಗಿದೆ.
ಈ ಸಂಬಂಧ ಬಿಜೆಪಿ ವರಿಷ್ಠ ಅಮಿತ್ ಶಾ ಅವರೇ ಖುದ್ದು ಯಡಿಯೂರಪ್ಪನವರಿಗೆ ಕರೆ ಮಾಡಿ ಈ ಸೂಚನೆ ನೀಡಿದ್ದಾರೆ. ಫೆಬ್ರವರಿ 17ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದ್ದು, ಈ ವೇಳೆ ವಿಪಕ್ಷಗಳು ಬಂಡಾಯವನ್ನೇ ಅಸ್ತ್ರವನ್ನಾಗಿ ತೆಗೆದುಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಅಧಿವೇಶನ ಮುಗಿಯುವವರೆಗೂ ಮೂಲಬಿಜೆಪಿಗರಿಗೆ ಸಚಿವ ಸ್ಥಾನ ನೀಡದಿರಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಹೀಗಾಗಿ ನಾಳೆ ನೂತನ 10 ಶಾಸಕರು ಮಾತ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
Key words: Ministerial position – only -10 people- tomorrow-Decision -BJP -High Command