ಬೆಂಗಳೂರು,ಡಿಸೆಂಬರ್,19,2022(www.justkannada.in): ಕಾಂಗ್ರೆಸ್ ನವರನ್ನ ಹಣಿಯಲು ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಐಟಿ ಇಡಿ ಸಿಬಿಐ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದರು.
ತಮ್ಮ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಈ ಹಿಂದೆ ಮೊಬೈಲ್ ಗಿಫ್ಟ್ ನೀಡಿದ್ದಕ್ಕೆ ನೋಟೀಸ್ ನೀಡಿದ್ದರು. ನನ್ನ ಸಂಬಂಧಿಕರು ವ್ಯವಹಾರದ ಪಾಲುದಾರರಿಗೂ ನೋಟೀಸ್ ನೀಡಿ ಸಿಬಿಐ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ವಕೀಲರಿಗೆ 5 ಲಕ್ಷ ರೂ. ಫೀಸ್ ನೀಡಿದ್ದಕ್ಕೂ ನೋಟಿಸ್ ನೀಡಿದ್ದರು. ನಮ್ಮ ಜಮೀನು ವ್ಯವಹಾರದ ಸಂಬಂಧ ತನಿಖೆ ಮಾಡಿದ್ದಾರೆ. ಇಂದು ನಮ್ಮ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ ಎಂದರು.
ನಮ್ಮ ಕುಟುಂಬಕ್ಕೆ ತನಿಖಾ ಸಂಸ್ಥೆಗಳಿಂದ ಕಿರುಕುಳ ನೀಡಲಾಗುತ್ತಿದೆ . ವಿರೊಧಿಗಳನ್ನ ಮಟ್ಟಹಾಕಲು ತನಿಖಾ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ. ನ್ಯಾಯಾಲಯ, ದೇವರ ಮೇಲೆ ಭಾರ ಹಾಕಿ ಮುನ್ನೆಡೆಯುತ್ತೇವೆ . ನಾನು ಯಾವುದೇ ತಪ್ಪು ಮಾಡದಿರುವುದರಿಂದ ಧೈರ್ಯವಾಗಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ ಹಾಗಾಗಿ ಭಯ ಪಡುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದರು.
Key words: Misuse – investigative- agencies – blame- Congress-DK Shivakumar