ಬೆಂಗಳೂರು,ಫೆಬ್ರವರಿ,1,2025 (www.justkannada.in): ಸಿಎಂ ರಾಜಕೀಯ ಸಲಹೆಗಾರರ ಹುದ್ದೆಗೆ ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಬಿ.ಆರ್.ಪಾಟೀಲ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಳೆಯ ಸ್ನೇಹಿತ ಹಾಗೂ ಪರಮಾಪ್ತರಲ್ಲಿ ಒಬ್ಬರು. ಈಗ ಏಕಾಏಕಿ ಬಿಆರ್ ಪಾಟೀಲ್ ಅವರು ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ನಲ್ಲಿ ಸಂಚಲನ ಮೂಡಿಸಿದೆ.
ಸಚಿವ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಬಿ.ಆರ್.ಪಾಟೀಲ್ ಹಲವು ಬಾರಿ ಬಹಿರಂಗವಾಗಿ ಹೇಳಿಕೆಗಳನ್ನು ನೀಡುವ ಮೂಲಕ ಸರ್ಕಾರ ಹಾಗೂ ಪಕ್ಷಕ್ಕೆ ಮುಜುಗರ ಉಂಟು ಮಾಡಿದ್ದರು.
Key words: MLA, B.R. Patil, resigns, post , CM’s political advisor