ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 6 ವರ್ಷಗಳ ಕಾಲ ಉಚ್ಚಾಟನೆ

ಬೆಂಗಳೂರು,ಮಾರ್ಚ್,26,2025 (www.justkannada.in): ಪಕ್ಷ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ವಿಜಯಪುರ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನ 6 ವರ್ಷಗಳ ಕಾಲ ಅಮಾನತು ಮಾಡಲಾಗಿದೆ.

ಬಿಜೆಪಿ ಕೇಂದ್ರಿಯ ಶಿಸ್ತು ಸಮಿತಿಯು ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಫೆಬ್ರವರಿ 10 ರಂದು  ಶಾಸಕ ಯತ್ನಾಳ್ ಗೆ ಶೋಕಾಸ್ ನೋಟಿಸ್ ನೀಡಲಾಗಿತ್ತು.  ನೋಟಿಸ್ ಗೆ ಉತ್ತರ ನೀಡದ ಕಾರಣ ಉಚ್ಚಾಟನೆ ಮಾಡಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಶಾಸಕ ಯತ್ನಾಳ್ ಅಗ್ಗಾಗ್ಗೆ ಹೇಳಿಕೆ ನೀಡುತ್ತಿದ್ದರು. ಅಲ್ಲದೆ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರರನ್ನ ಬದಲಿಸುವಂತೆ ಆಗ್ರಹಿಸಿದ್ದರು.

Key words:  MLA, Basanagowda Patil Yatnal, BJP, expelled, 6 years