ರಾಯಚೂರು,ಅಕ್ಟೋಬರ್,22,2022(www.justkannada.in): ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್ ಸೇರ್ಪಡೆಯ ಸುಳಿವು ನೀಡಿದ್ಧ ಶಾಸಕ ಜಿಟಿ ದೇವೇಗೌಡರನ್ನ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಖುದ್ಧು ಅಖಾಡಕ್ಕಿಳಿದು ಮನವೊಲಿಸುವಲ್ಲಿ ಈಗಾಗಲೇ ಯಶಸ್ವಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರ್ಪಡೆಯಿಂದ ಹಿಂದೆ ಸರಿದ ಶಾಸಕ ಜಿ.ಟಿ ದೇವೇಗೌಡರು ಕಾಂಗ್ರೆಸ್ ಮತ್ತು ಬಿಜೆಪಿ ಬಳಿ ಕ್ಷಮೆಯಾಚಿಸಿದ್ಧರು.
ಈ ಕುರಿತು ರಾಯಚೂರಿನಲ್ಲಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ನಾನು ಆ ಬಗ್ಗೆ ಮಾತನಾಡುವುದಿಲ್ಲ. ಏನಾಗಿದೆ ಎಂದು ಗೊತ್ತಿಲ್ಲ. ನಾನು ಪಾದಯಾತ್ರೆಯಲ್ಲಿದ್ದೇನೆ. ಆ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದಿದ್ದಾರೆ.
ರಾಜ್ಯದಲ್ಲಿ ನಾಳೆ ಭಾರತ್ ಜೋಡೋ ಯಾತ್ರೆ ಅಂತ್ಯವಾಗಲಿದೆ.ಲಕ್ಷಾಂತರ ಜನರು ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ರೈತರು,ಮಕ್ಕಳು, ಮಹಿಳೆಯರು ಎಲ್ಲರೂ ಹೆಚ್ಚಾಗಿ ಪಾಲ್ಗೊಂಡು ಹೆಜ್ಜೆ ಹಾಕಿದ್ದಾರೆ. ಅಭಿನಂದನೆ ಸಲ್ಲಿಸುವೆ ಎಂದರು.
ಜೆಡಿಎಸ್ ನಲ್ಲೇ ಉಳಿಯಲು ನಿರ್ಧರಿಸಿರುವ ಶಾಸಕ ಜಿ.ಟಿ ದೇವೇಗೌಡರು ಚಾಮುಂಡೇಶ್ವರಿ ಕ್ಷೇತ್ರದಿಂದ ಹಾಗೂ ಪುತ್ರ ಹರೀಶ್ ಗೌಡ ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
Key words: MLA-GT Deve Gowda-JDS-Congress-DK Shivakumar