ಮೈಸೂರು,ಜನವರಿ,11,2021(www.justkannada.in): ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಸಚಿವಾಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಈ ಮಧ್ಯೆ ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಪರೋಕ್ಷವಾಗಿ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿದ್ದಾರೆ.
ಹೌದು, ಸುತ್ತೂರಿನಲ್ಲಿ ಈ ಕುರಿತು ಮಾತನಾಡಿದ ಶಾಸಕ ಎನ್. ಮಹೇಶ್, ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರೋಲ್ಲ ಹೇಳಿ. ಸಚಿವ ಸ್ಥಾನ ಕೊಟ್ಟರೆ ಉತ್ತಮವಾದ ಕೆಲಸ ಮಾಡುವೆ. ಆದ್ರೆ ಕೊಡೋದು ಬಿಡೋದು ಅವರಿಗೆ ಬಿಟ್ಟದ್ದು ಎಂದಿದ್ದಾರೆ.
ನನಗೆ ಸಚಿವ ಸ್ಥಾನ ಸಿಗುತ್ತೋ ಇಲ್ವೋ ನನಗೆ ಗೊತ್ತಿಲ್ಲ. ಆ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ಆದರೇ ನಾನು ಯಡಿಯೂರಪ್ಪ ಜೊತೆ ಇರುವ ನಿರ್ಧಾರ ಮಾಡಿದ್ದೇನೆ. ಬಿಜೆಪಿ ಸರ್ಕಾರಕ್ಕೆ ನನ್ನ ಬೆಂಬಲ ಇದೆ. ಸಚಿವ ಸ್ಥಾನ ಕೊಡುವುದು ಬಿಡುವುದು ಅವರಿಗೆ ಬಿಟ್ಟದ್ದು. ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಹಾಗೂ ರಾಜ್ಯದ ಅಭಿವೃದ್ಧಿ ಮಾಡುವೆ ಎಂದು ಪರೋಕ್ಷವಾಗಿ ತಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.
ENGLISH SUMMARY…
Kollegal MLA N. Mahesh indirectly expresses his desire to become Minister
Mysuru, Jan. 11, 2021 (www.justkannada.in): The State Government has received a green signal for cabinet expansion and lobbying for posts of Ministers has commenced. Kollegal MLA N. Mahesh has indirectly expressed his wish to become a Minister.
Speaking to the press persons at Suttur today he said, “who doesn’t wish to become a Minister. If I will be made a Minister I will do good work. But it is left to them to make me one.”
“I don’t know whether I will get a chance or not to become a minister, nothing is discussed yet. But I have decided to stay with Yedyurappa. My support is for BJP,” he added.
Keywords: N. Mahesh/ Yedyurappa/ BJP Minister/ aspirant
Key words: MLA-N. Mahesh- indirectly-demanded -ministerial position- mysore