ಬೆಂಗಳೂರು,ಆಗಸ್ಟ್,4,2021(www.justkannada.in): ಸಿಎಂ ಆದ ಒಂದು ವಾರದೊಳಗಡೆ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ರಚನೆ ಮಾಡುವಲ್ಲಿ ಯಶಸ್ವಿಯಾಗಿದ್ದು 29 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಈ ನಡುವೆ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಲಾಬಿ ನಡೆಸಿದ್ಧ ಹಲವು ಶಾಸಕರಿಗೆ ನಿರಾಸೆಯಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಎಂ.ಪಿ ರೇಣುಕಾಚಾರ್ಯ, ರಾಜೂಗೌಡ, ಅರವಿಂದ ಬೆಲ್ಲದ್, ಸಿಪಿ ಯೋಗೇಶ್ವರ್, ಬಸನಗೌಡ ಪಾಟೀಲ್ ಯತ್ನಾಳ್, ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೇರಿ ಹಲವರಿಗೆ ನಿರಾಸೆ ಉಂಟಾಗಿದೆ.
ಈ ಮಧ್ಯೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ಸಿಗುವುದು ಖಚಿತವಾಗಿದೆ ಎನ್ನಲಾಗಿತ್ತು. ಆದರೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮಂತ್ರಿಗಿರಿ ಕೈತಪ್ಪಿದ್ದು ಈ ಹಿನ್ನೆಲೆಯಲ್ಲಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಫೇಸ್ ಬುಕ್ ಪೋಸ್ಟ್ ಮಾಡಿರುವ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ನನಗೆ ಯಾವುದೇ ಹಗರಣದಲ್ಲಿ ಸುತ್ತಿಕೊಂಡಿಲ್ಲ. ಹಗರಣದಲ್ಲಿ ಸಿಲುಕಿದವರಿಗೆ ಮತ್ತೆ ಸ್ಥಾನ ನೀಡಲಾಗಿದೆ. ಸ್ವಂತಬಲದಿಂದ ಗೆದ್ದಿರುವ ಶಾಸಕಿಗೆ ಅವಮಾನ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Key words: MLA-Purnima Srinivas -upset –over- minister Position