ಬೆಂಗಳೂರು,ಆ,30,2019(www.justkannada.in): ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಮುಖ್ಯಮಂತ್ರಿಗಳ ಆಪ್ತವಲಯಗಳಲ್ಲಿ ಗುರುತಿಸಿಕೊಂಡಿದ್ದ ಎಸ್.ಆರ್ ವಿಶ್ವನಾಥ್ , ಸಮ್ಮಿಶ್ರ ಸರ್ಕಾರದ ಪತನಕ್ಕೂ ಮುನ್ನ ಅತೃಪ್ತ ಶಾಸಕರನ್ನ ರೆಸಾರ್ಟ್ ನಲ್ಲಿಟ್ಟು ಪರಿಸ್ಥಿತಿ ನಿಭಾಯಿಸಿದ್ದರು. ಈಗ ಅವರನ್ನ ಸಂಪುಟ ದರ್ಜೆಯ ಸ್ಥಾನಮಾನವಷ್ಟೇ ಹೊಂದಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಸಿಎಂ ಬಿಎಸ್ ಯಡಿಯೂರಪ್ಪ ನೇಮಕ ಮಾಡಿದ್ದಾರೆ. ಈ ಕುರಿತು ಅಧಿಕೃತ ಘೋಷಣೆಯಷ್ಟೆ ಬಾಕಿ ಇದೆ.
Key words: MLA SR Vishwanath- appointed -political secretary – chief ministers