ಮೈಸೂರು,ಮೇ,25,2021(www.justkannada.in): ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರಿಗೆ ಸಹಾಯ ಧನ ನೀಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಕ್ಕೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಪತ್ರ ಬರೆದಿದ್ದಾರೆ.
ಈ ಸಂಬಂಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದಿರುವ ಶಾಸಕ ತನ್ವೀರ್ ಸೇಠ್, ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಅರ್ಥಿಕ ಸಹಾಯದ ಆಗತ್ಯ ಇದೆ. ಖಾಸಗಿ ಶಾಲಾ ಶಿಕ್ಷಕರಿಗೆ 30 ಸಾವಿರ ಸಹಾಯ ಧನ ನೀಡಬೇಕು. ಶಿಕ್ಷಕರಿಗೆ ಸೋಂಕು ತಗುಲಿದರೆ ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ರೈತರು, ಕಾರ್ಮಿಕರು ಸೇರಿ ವಿವಿಧ ವರ್ಗಗಳಿಗೆ ಸಹಾಯಧನ ನೀಡುವುದಾಗಿ ತಿಳಿಸಿದ್ದಾರೆ. ಆದರೆ ಖಾಸಗಿ ಶಿಕ್ಷಕರಿಗೆ ಯಾವುದೇ ಸಹಾಯದ ಧನ ಘೋಷಣೆ ಮಾಡದ ಹಿನ್ನೆಲೆ, ಶಿಕ್ಷಕ ವರ್ಗಕ್ಕೂ ಸಹಾಯಧನ ನೀಡುವಂತೆ ಸರ್ಕಾರಕ್ಕೆ ಒತ್ತಡ ಹೇರಲಾಗುತ್ತಿದೆ.
Key words: MLA- Tanveer Sait, -wrote –letter-state government.