ಮೈಸೂರು,ಮಾ,6,2020(www.justkannada.in): ತಮ್ಮ ಮೇಲೆ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಿಧಾನಗತಿಯಲ್ಲಿ ನಡೆಯುತ್ತಿರುವುದಕ್ಕೆ ಶಾಸತ ತನ್ವೀರ್ ಸೇಠ್ ಬೇಸರ ವ್ಯಕ್ತಪಡಿಸಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಗೃಹ ಸಚಿವ ಬಸವರಾಜು ಬೊಮ್ಮಾಯಿಗೆ ಪತ್ರ ಬರೆದಿರುವ ಶಾಸಕ ತನ್ವೀರ್ ಸೇಠ್. ಈ ಪ್ರಕರಣದ ಆರೋಪಿಯನ್ನ ಈಗಾಗಲೇ ಬಂಧಿಸಲಾಗಿದೆ. ಆದರೂ ತನಿಖೆ ಮಾತ್ರ ನಿಧಾನಗತಿಯಲ್ಲಿ ನಡೆಯುತ್ತಿದೆ. ಈ ಪ್ರಕರಣದ ಹಿಂದಿರುವ ಪ್ರಮುಖರು, ಸಂಘಟನೆ ಹಾಗೂ ಹಲ್ಲೆಯ ಉದ್ದೇಶವನ್ನ ಪತ್ತೆ ಹಚ್ಚಲು ಆಗಿಲ್ಲ. ಇದರಲ್ಲಿ ಪೊಲೀಸರು ವಿಫಲರಾಗಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ಈ ಪ್ರಕರಣದ ತೀವ್ರತೆಯನ್ನ ಪರಿಗಣಿಸಿಬೇಕು. ಕೂಡಲೇ ಹಲ್ಲೆಯ ಹಿಂದಿರುವ ಪ್ರಮುಖರು, ಸಂಘಟನೆಯನ್ನ ಪತ್ತೆಹಚ್ಚಬೇಕು. ನಮಗೆ ನ್ಯಾಯ ಒದಗಿಸಬೇಕು ಎಂದು ಗೃಹ ಸಚಿವರಿಗೆ ಪತ್ರದ ಮೂಲಕ ಶಾಸಕ ತನ್ವೀರ್ ಸೇಠ್ ಮನವಿ ಮಾಡಿದ್ದಾರೆ.
Key words: MLA -Tanveer Saith – wrote -letter – Home Minister- Basavaraja Bommai