ಮೈಸೂರು,ಅಕ್ಟೋಬರ್,29,2022(www.justkannada.in): ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಮೆಲ್ಲಹಳ್ಳಿ ಹಾರೋಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಸೇರಿದ ಹಳ್ಳಿ ಕೆರೆಹುಂಡಿ ಗ್ರಾಮದ ಬಳಿ ನಿರ್ಮಿಸಿರುವ ಕಸ ವಿಲೇವಾರಿ ಘಟಕ ಉದ್ಘಾಟನೆ ಹಾಗೂ ಘಟಕದ ಸುತ್ತ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದರು.
ಭೂಮಿಪೂಜೆ ಬಳಿಕ ಗ್ರಾಮದಲ್ಲಿ ಏರ್ಪಡಿಸಿದ್ದ ಜನ ಸಂಪರ್ಕ ಸಭೆಯಲ್ಲಿ ಗ್ರಾಮಸ್ಥರು ಗ್ರಾಮದಲ್ಲಿ ಸ್ಮಶಾನ ಭೂಮಿ ಇಲ್ಲ. ಹೀಗಾಗಿ ಸ್ಮಶಾನ ಜಾಗವನ್ನ ಗುರುತಿಸಿ ಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.
ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಪ್ರತಿ ಗ್ರಾಮದಲ್ಲೂ ಸ್ಮಶಾನ ಭೂಮಿ ಇರಲೇಬೇಕು ಈ ಬಗ್ಗೆ ಮೆಲ್ಲಹಳ್ಳಿ ಹಾಗೂ ಹಳ್ಳಿಕೆರೆಹುಂಡಿ ಗ್ರಾಮಸ್ಥರು ಹಲವಾರು ಬಾರಿ ನನ್ನ ಗಮನಕ್ಕೆ ತಂದಿದ್ದಾರೆ 2 ಗ್ರಾಮಕ್ಕೆ ಪ್ರತ್ಯೇಕವಾಗಿ ಸರ್ಕಾರದ ಭೂಮಿ ಎಲ್ಲಿದೆಯೋ ಅಲ್ಲಿ ಸ್ಮಶಾನ ಜಾಗವನ್ನು ಗುರುತಿಸಿ ಅಭಿವೃದ್ಧಿಪಡಿಸಬೇಕು ಎಂದು ಸ್ಥಳದಲ್ಲಿದ್ದ ಪಿಡಿಒ ಹಾಗೂ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಲ್ಲದೆ ಗ್ರಾಮದಲ್ಲಿ ಇನ್ನು ಹಲವಾರು ಸಮಸ್ಯೆಗಳಿದ್ದು ಆ ಎಲ್ಲ ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸುತ್ತೇನೆ ಎಂದು ಗ್ರಾಮಸ್ಥರಿಗೆ ಶಾಸಕ ಯತೀಂದ್ರ ಸಿದ್ಧರಾಮಯ್ಯ ಭರವಸೆ ನೀಡಿದರು. ಈ ಸಂದರ್ಭದಲ್ಲಿ ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕೆ ಮುದ್ದೇಗೌಡ, ಗ್ರಾಮ ಪಂಚಾಯತಿ ಅಧ್ಯಕ್ಷ ಶಾಂತಮ್ಮ ಎಪಿಎಂಸಿ ಅಧ್ಯಕ್ಷ ಲಕ್ಷ್ಮಿಪುರ ಅನಿಲ್ ಕುಮಾರ್, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುಳಾ ಮಂಜುನಾಥ್, ಮುಖಂಡರಾದ ಗಂಗ ತಿಮ್ಮಯ್ಯ, ನಾಗರಾಜ ನಾಯಕ, ಮೆಲ್ಲಹಳ್ಳಿ ಸಿದ್ದಯ್ಯ ಮಹಾದೇವ ರವಿ ಗೌಡ, ಎಪಿಎಂಸಿ ಮಾಜಿ ಉಪಾಧ್ಯಕ್ಷ ಆನಂದ್ ಪಿಡಿಒ ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Key words: MLA- Yatindra Siddaramaiah – Bhumi Puja – inauguration -mysore