ವಿಜಯಪುರ, ಜನವರಿ 11,2025 (www.justkannada.in): ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು. ಸಿಎಂ ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಕ್ಸಲರು ಶಸ್ತ್ರಾಸ್ತ್ರಗಳನ್ನು ಮುಂದಿಟ್ಟು ಬಳಿಕ ಶರಣಾಗತಿ ಆಗಬೇಕಿತ್ತು. ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗಿದ್ದಾರೆ. ಎಷ್ಟೋ ಪೊಲೀಸ್ ಅಧಿಕಾರಿಗಳು, ರೈತರು ಪ್ರಾಣ ಕಳೆದುಕೊಂಡಿದ್ದಾರೆ. ನಕ್ಸಲರಿಗೆ ಏನು ಕೊಡಬೇಕೆಂದು ಕೋರ್ಟ್ ತೀರ್ಮಾನ ಮಾಡುತ್ತದೆ. ನಕ್ಸಲರಿಂದ ಹತ್ಯೆಯಾದ ಪೊಲೀಸರು, ನಾಗರಿಕರ ಕುಟುಂಬಕ್ಕೆ ಏನು ಕೊಟ್ಟರು? ಮುಖ್ಯವಾಹಿನಿಗೆ ಬರಬೇಕು ಅಂದರೆ ಕಾನೂನು ಪ್ರಕಾರ ಆಗಬೇಕು ಎಂದು ತಿಳಿಸಿದರು.
ಬಿಜೆಪಿಯ ಮಾಜಿ ಶಾಸಕರ ಸಭೆ ಕುರಿತು ಪ್ರತಿಕ್ರಿಯಿಸಿದ ಶಾಸಕ ಯತ್ನಾಳ್, ನಾವು ಯಾರು ಆತ್ಮ ಸಾಕ್ಷಿಯಾಗಿ ಹೋಗಿಲ್ಲ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿರುವ ಕಾರಣದಿಂದ ಹೊಗಿದ್ದೇವೆ. ನಾವು ಪಕ್ಷದ ವಿರುದ್ದ ಹೋಗಿಲ್ಲ. ಅವರ ಸಭೆ ಕರೆದಿರುವ ಬಗ್ಗೆ ನಮ್ಮದೇನು ವಿರೋಧವಿಲ್ಲ. ಅವರೆಲ್ಲ ಮಾಜಿಗಳು ಆಗಲು ಕಾರಣರು ಯಾರು. ಅದು ಆತ್ಮಾವಲೋಕನ ಅಲ್ಲಿ ಆಗಬೇಕಿತ್ತು ಎಂದರು.
Key words: CM Siddaramaiah, surrendered, Naxals, MLA, Yatnal