ಮೈಸೂರು,ಫೆಬ್ರವರಿ,21,2025 (www.justkannada.in): ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದ ಬೆನ್ನಲ್ಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಫೈಲ್ ವೊಂದನ್ನ ತಾಯಿ ಚಾಮುಂಡೇಶ್ವರಿ ಮುಂದೆ ಇಟ್ಟು ಪೂಜೆ ಸಲ್ಲಿಸಿದ್ದರು. ಇದೀಗ ಆ ಫೈಲ್ ಯಾವ ವಿಚಾರಕ್ಕೆ ಸಂಬಂಧಿಸಿದ್ದು ಎಂಬುದು ತಿಳಿದು ಬಂದಿದೆ.
ಸ್ವತಃ ಈ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಟ್ವೀಟ್ ಮಾಡಿದ್ದು, ಸುಪ್ರೀಂ ಕೋರ್ಟ್ ಆದೇಶಾನುಸಾರ ನಮ್ಮ ಸಿದ್ದಸಿರಿ ಪವರ್ ಹಾಗು ಎಥನಾಲ್ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದೆ. ಈ ಸಂಬಂಧ ನಾನು ನಾಡದೇವತೆ ಚಾಮುಂಡೇಶ್ವರಿ ಅಮ್ಮನವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಪೂಜೆ ಸಲ್ಲಿಸಿದ್ದೇನೆ. ಚಿಂಚೋಳಿ ತಾಲ್ಲೂಕಿನಲ್ಲಿರುವ ನಮ್ಮ ಕಾರ್ಖಾನೆ ಆರಂಭವಾಗುವುದರಿಂದ ನೂರಾರು ಉದ್ಯೋಗ ಸೃಷ್ಟಿಯಾಗುತ್ತದೆ ಹಾಗು ರೈತರ ಏಳಿಗೆಗೆ ನಾಂದಿಯಾಗುತ್ತದೆ ಎಂದಿದ್ದಾರೆ.
ಈ ಮೂಲಕ ಶಾಸಕ ಯತ್ನಾಳ್ ಅವರು ಸಿದ್ದಸಿರಿ ಪವರ್ ಹಾಗು ಎಥನಾಲ್ ಕಾರ್ಖಾನೆಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿರುವುದಕ್ಕೆ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ತಾಯಿ ಚಾಮುಂಡೇಶ್ವರಿ ಮುಂದೆ ಇಟ್ಟಿದ್ದ ಫೈಲ್ ತಮಗೆ ನೀಡಿದ್ದ ನೋಟಿಸ್ ಗೆ ಪ್ರತಿಯಾಗಿ ಉತ್ತರ ಬರೆದ ಫೈಲ್ ಎಂದು ವರದಿಯಾಗಿತ್ತು. ನೋಟಿಸ್ ನಲ್ಲಿ ಮಾಜಿ ಸಿಎಂ ಬಿಎಸ್ ವೈ, ಬಿ.ವೈ.ವಿಜಯೇಂದ್ರ ವಿರುದ್ಧ ದೂರಿರುವ ಕುರಿತು ಮಾಹಿತಿ ಇದೆ ಎನ್ನಲಾಗಿತ್ತು.
Key words: Chamundi hills, puja, , file, MLA Yatnal