ಬೆಂಗಳೂರು,ಆ,17,2019(www.justkannada.in): ಹಿರಿಯ ಸಂಶೋಧಕ ಎಂ.ಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳದ ಅಧಿಕಾರಿಗಳು ಇಂದು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಹಿರಿಯ ಸಂಶೋಧಕ ಎಂ.ಎಂ ಕಲಬುರ್ಗಿ ಹತ್ಯೆಯಾದ ನಾಲ್ಕು ವರ್ಷಗಳ ನಂತರ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. 2015 ಆಗಸ್ಟ್ 30 ರಂದು ಧಾರವಾಡದ ಕಲ್ಯಾಣನಗರದಲ್ಲಿ ಡಾ.ಎಂ.ಎಂ ಕಲಬುರ್ಗಿ ಅವರ ಹತ್ಯೆಯಾಗಿತ್ತು. ನಂತರ ಈ ಕುರಿತು ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಂತರ ಪ್ರಕರಣವನ್ನ ಸಿಐಡಿ ತನಿಖೆಗೆ ವಹಿಸಲಾಗಿತ್ತು. ಸಿಐಡಿ ತನಿಖೆಯಿಂದ ಹಂತಕರು ಪತ್ತೆಯಾಗಿರಲಿಲ್ಲ. ಈ ನಡುವೆ 2017 ಸೆಪ್ಟಂಬರ್ 5 ರಲ್ಲಿ ಗೌರಿ ಲಂಕೇಶ್ ಹತ್ಯೆಯಾಗಿತ್ತು. ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡ ರಚಿಸಲಾಗಿತ್ತು. ಎಸ್ ಐಟಿ ತಂಡ ಆರೋಪಿಗಳನ್ನ ಬಂಧಿಸಿತ್ತು. ಈ ವೇಳೆ ಡಾ.ಎಂ.ಎಂ ಕಲಬುರ್ಗಿ ಹತ್ಯೆ ಬಗ್ಗೆ ವಿಷಯ ಬಾಯ್ಬಿಟ್ಟಿದ್ದರು.
ಇದೀಗ ಪ್ರಕರಣ ಸಂಬಂಧ ಎಸ್ಐ ಟಿಅಧಿಕಾರಿಗಳು ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ.
Key words: MM Kalaburgi -murder case -Charge sheet- submission -SIT