ಬೆಂಗಳೂರು,ನ,5,2019(www.justkannada.in): ಅಪರೇಷನ್ ಕಮಲ ಕುರಿತು ಮಾತನಾಡಿದ್ದ ಆಡಿಯೋ ವೈರಲ್ ಆದ ಹಿನ್ನೆಲೆ ಇದೀಗ ಎಚ್ಚತ್ತುಕೊಂಡ ಸಿಎಂ ಬಿಎಸ್ ಯಡಿಯೂರಪ್ಪ ತಮ್ಮ ಭೇಟಿಗೆ ಬರುವವರಿಗೆ ಮೊಬೈಲ್ ನಿಷೇಧ ಹೇರಿದ್ದಾರೆ.
ತಮ್ಮನ್ನ ಭೇಟಿಗೆ ಬರುವಾಗ ಕಾರ್ಯಕರ್ತರು ಮತ್ತು ಮುಖಂಡರು ಮೊಬೈಲ್ ತರದಂತೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಿಎಂ ಬಿಎಸ್ ವೈ ಪೊಲೀಸರಿಗೂ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ಹಿನ್ನೆಲೆ ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸದಲ್ಲಿ ಮೊಬೈಲ್ ನಿಷೇಧದ ಬಗ್ಗೆ ಬೋರ್ಡ್ ಹಾಕಲಾಗಿದೆ.
ಇತ್ತೀಚೆಗೆ ಸಿಎಂ ಬಿಎಸ್ ಯಡಿಯೂರಪ್ಪ ಬಿಜೆಪಿ ಮುಖಂಡರು ಕಾರ್ಯಕರ್ತರ ಜತೆ ಸಭೆ ನಡೆಸುತ್ತಿದ್ದ ವೇಳೆ ಅನರ್ಹ ಶಾಸಕರು ಅಪರೇಷನ್ ಕಮಲದ ಬಗ್ಗೆ ಮಾತನಾಡಿದ್ದ ಆಡಿಯೋ ಲೀಕ್ ಆಗಿತ್ತು. ಈ ಕುರಿತು ಕಾಂಗ್ರೆಸ್ ರಾಜ್ಯಪಾಲರಿಗೆ ದೂರು ನೀಡಿದ್ದು ಸುಪ್ರೀಂಕೋರ್ಟ್ ನಲ್ಲೂ ಪ್ರಸ್ತಾಪಿಸಿದೆ. ಆಡಿಯೋ ವಿಚಾರವನ್ನ ಸಾಕ್ಷಿಯಾಗಿ ಪರಿಗಣಿಸಲು ಸುಪ್ರೀಂಕೋರ್ಟ್ ಒಪ್ಪಿಗೆ ನೀಡಿದೆ.
Key words: Mobile –ban- CM BS Yeddyurappa – visit-activitist