ಬೆಂಗಳೂರು,ಮಾರ್ಚ್,3,2023(www.justkannada.in): ಪುತ್ರ ಪ್ರಶಾಂತ್ ಮಾಡಾಳ್ ನಿವಾಸ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಇದೀಗ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಮೇರೆಗೆ ಸಿಎಂ ಕಚೇರಿಯಲ್ಲಿ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ಹಾಗೂ ಕುಟಂಬದ ಮೇಲೆ ಷಡ್ಯಂತ್ರ ಮಾಡಲಾಗಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಿನ್ನೆ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಲ್ ಕಚೇರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ ವೇಳೆ 8 ಕೋಟಿ ರೂ ಹಣ ಪತ್ತೆಯಾಗಿದೆ . ಈ ಸಂಬಂಧ ನಿಗಮಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದರು.
Key words: Modal Virupakshappa – resignation – chairman – KSDL Corporation.