ಬೆಂಗಳೂರು, ಸೆಪ್ಟೆಂಬರ್ 25, 2022 (www.justkannada.in): ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಸೆ.26ರವರೆಗೆ ಇದು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಮಂಗಳೂರು, ಉತ್ತರ ಕನ್ನಡ, ಉಡುಪಿ, ಕಾರವಾರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಿದೆ.
ಕರ್ನಾಟಕದ ಕರಾವಳಿಯ ಮತ್ತು ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿಡ ವಾತಾವರಣವಿದ್ದು, ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.