ಬೆಂಗಳೂರು,ಆಗಸ್ಟ್,26,2023(www.justkannada.in): ಚಂದ್ರಯಾನ-3 ಯಶಸ್ವಿಯದ ಹಿನ್ನೆಲೆ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ ವಿಜ್ಞಾನಿಗಳನ್ನ ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ, ವಿಕ್ರಮ್ ಲ್ಯಾಂಡರ್ ಇಳಿದ ಸ್ಥಳಕ್ಕೆ ಶಿವಶಕ್ತಿ ಪಾಯಿಂಟ್ ಹೆಸರು ಹಾಗೂ ಆಗಸ್ಟ್ 23 ದಿನವನ್ನ ‘ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಿದರು.
ಬೆಂಗಳೂರಿನ ಪೀಣ್ಯದಲ್ಲಿರುವ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಚಂದ್ರಯಾನ-3 ರ ಯಶಸ್ಸಿನಲ್ಲಿ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಕೊಂಡಾಡಿದರು.
ಚಂದ್ರಯಾನ-3 ಯೋಜನೆ ಯಶಸ್ವಿಯಾದ, ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡ್ ಆದ ದಿನವನ್ನು, ಅಂದರೆ ಆಗಸ್ಟ್ 23 ಅನ್ನು ಇನ್ನು ಮುಂದೆ ‘ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದರು.
ಚಂದ್ರಯಾನ-2 ಪತನ ಸ್ಥಳಕ್ಕೆ ‘ತಿರಂಗ ಪಾಯಿಂಟ್, ಚಂದ್ರಯಾನ-3 ರ ಚಂದ್ರನ ಲ್ಯಾಂಡರ್ ಇಳಿದ ಸ್ಥಳವನ್ನು ‘ಶಿವಶಕ್ತಿ ಪಾಯಿಂಟ್’ ಎಂದು ನಾಮಕರಣ ಮಾಡಿದ ಪ್ರಧಾನಿ ಮೋದಿ, ಈ ತಿರಂಗ ಪಾಯಿಂಟ್ ಮುಂದಿನ ಸಾಧನೆಗಳಿಗೆ ಪ್ರೇರಣೆಯಾಯಿತು. ಚಂದ್ರಯಾನ-3 ಯಶಸ್ಸಿನಲ್ಲಿ ಇಸ್ರೋ ಸಾಧನೆ ದೊಡ್ಡದು. ಮೇಕ್ ಇನ್ ಇಂಡಿಯಾ ಚಂದ್ರನವರೆಗೂ ತಲುಪಿದೆ. ವಿಜ್ಞಾನಿಗಳ ಸಾಧನೆ ದೇಶದ ಪ್ರತಿಯೊಬ್ಬರಿಗೂ ತಿಳಿಯಬೇಕಿದೆ. ಚಂದ್ರಯಾನ-3 ರ ಯಶಸ್ಸಿನಿಂದ ಯುವ ಪೀಳಿಗೆಗೆ ನಿರಂತರವಾಗಿ ಪ್ರೇರಣೆ ಸಿಗಲಿದೆ ಎಂದರು.
ಕೇಂದ್ರ, ರಾಜ್ಯ ಸರ್ಕಾರ ಸಹಯೋಗದಲ್ಲಿ ಬಾಹ್ಯಾಕಾಶ, ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿ ರಾಷ್ಟ್ರಮಟ್ಟದ ಹ್ಯಾಕಥಾನ್ ಆಯೋಜಿಸಲಾಗುವುದು. ಇಸ್ರೋ ವಿಜ್ಞಾನಿಗಳು ಹಲವು ಉಪಗ್ರಹ ಉಡಾವಣೆ ಮಾಡಿದ್ದಾರೆ. ಈ ಉಪಗ್ರಹಗಳ ನೆರವಿನಿಂದ ಹಲವು ಕ್ಷೇತ್ರಗಳಿಗೆ ಅನುಕೂಲ ಆಗ್ತಿದೆ. ಕೃಷಿ, ಶಿಕ್ಷಣ, ವಿಜ್ಞಾನ, ತಂತ್ರಜ್ಞಾನ ಕ್ಷೇತ್ರಗಳಿಗೆ ಅನುಕೂಲವಾಗುತ್ತಿದೆ. ತಂತ್ರಜ್ಞಾನ ಬೆಳವಣಿಗೆಯಾದರೆ ದೇಶ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಮೋದಿ ಹೇಳಿದರು.
Key words: Modi -declared – spot – Chandrayaan-3- lunar lander -Shiva Shakti Point