ನವದೆಹಲಿ,ಫೆಬ್ರವರಿ,19,2022(www.justkannada.in): ಆಧುನಿಕ ಕೃಷಿ ಪದ್ಧತಿಯಲ್ಲೊಂದು ಹೊಸ ಅಧ್ಯಾಯ ಶುರುವಾಗಿದ್ದು 100 ಕಿಸಾನ್ ಡ್ರೋನ್ ಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.
ಭಾರತದ ವಿವಿಧ ನಗರಗಳು, ಪಟ್ಟಣಗಳಲ್ಲಿ 100 ಕಿಸಾನ್ ಡ್ರೋನ್ಗಳಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಕೃಷಿ ಭೂಮಿಗಳಿಗೆ ಕೀಟನಾಶಕ ಸಿಂಪಡಿಸುವ ಡ್ರೋನ್ ಗಳು ಇವಾಗಿದ್ದು, ಇದರಿಂದ ರೈತರಿಗೆ ತುಂಬ ಅನುಕೂಲವಾಗಲಿವೆ. ಹಾಗೇ, ಆಧುನಿಕ ಕೃಷಿ ಪದ್ಧತಿಯ ನಿರ್ಮಾಣದಲ್ಲಿ ಇದೊಂದು ಹೊಸ ಅಧ್ಯಾಯವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಮೊದಲು ಡ್ರೋನ್ ಎಂದರೆ ಕೇವಲ ಸೇನೆಗೆ ಸಂಬಂಧಪಟ್ಟಿದ್ದು, ವೈರಿಗಳೊಂದಿಗೆ ಹೋರಾಡಲು ಬಳಸುವಂಥದ್ದು ಎಂದು ಭಾವಿಸಲಾಗುತ್ತಿತ್ತು. ಆದರೆ ಪ್ರಸ್ತುತ 21ನೇ ಶತಮಾನದಲ್ಲಿ ಆಧುನಿಕ ಕೃಷಿ ಪದ್ಧತಿಯೆಡೆಗಿನ ಒಂದು ಹೆಜ್ಜೆಯಾಗಿ ಪರಿಗಣಿಸಲ್ಪಟ್ಟಿದೆ. ಇದೊಂದು ಹೊಸ ಅಧ್ಯಾಯ ಎಂದು ನುಡಿದರು.
Key words: Prime Minister-Narendra Modi-100 Kisan drones