ಮಂಗಳೂರು,ಜೂನ್,28,2023(www.justkannada.in): ಅಕ್ಕಿ ಕೊರತೆ ಹಿನ್ನೆಲೆ 5 ಕೆಜಿ ಅಕ್ಕಿಯ ಹಣವನ್ನ ಹಾಕಲು ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ನಡೆಯನ್ನ ಬಿಜೆಪಿ ನಾಯಕರು ಟೀಕಿಸಿದ್ದಾರೆ.
ಈ ಕುರಿತು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಅಕ್ಕಿ ಬದಲು ಹಣ ಹಾಕುವ ಡೋಂಗಿ ರಾಜಕಾರಣ ಸರಿಯಲ್ಲ. ಸರ್ಕಾರಕ್ಕೆ ಅಕ್ಕಿ ಕೊಡಲಾಗದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಚುನಾವಣಾ ಪೂರ್ವದಲ್ಲಿ ತಲಾ 10 ಕೆಜಿ ಅಕ್ಕಿ ಕೊಡ್ತೇವೆ ಎಂದಿದ್ದರು. ಕೇಂದ್ರ ಸರ್ಕಾರದ್ದು ಸೇರಿದಂತೆ ಒಟ್ಟು 15 ಕೆಜಿ ಅಕ್ಕಿ ಕೊಡಬೇಕಿತ್ತು. ಈಗ ರಾಜ್ಯ ಸರ್ಕಾರ ಅಕ್ಕಿ ಬದಲು ಹಣ ಹಾಕಲು ಹೊರಟಿದೆ. ಹಣ ಏನು ತಿನ್ನಲು ಆಗುತ್ತಾ ಅಂತಾ ಎಂದು ಪ್ರಶ್ನಿಸಿದರು.
ನೈತಿಕತೆ ಇಲ್ಲದ ಸರ್ಕಾರ ಸಿದ್ದರಾಮಯ್ಯ ಸರ್ಕಾರ- ಎನ್.ರವಿ ಕುಮಾರ್.
ಈ ಕುರಿತು ಪ್ರತಿಕ್ರಿಯಿಸಿದ ಎಂಎಲ್ ಸಿ ಎನ್. ರವಿ ಕುಮಾರ್, ನೈತಿಕತೆ ಇಲ್ಲದ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ಸಿದ್ದರಾಮಯ್ಯ ಬಡವರಿಗೆ ಮೋಸ ಮಾಡಿದ್ದಾರೆ. ತಲಾ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿ ಈಗ ಜನಕ್ಕೆ ಮೋಸ ಮಾಡಿದ್ದೀರಿ. ಹಣ ತಿನ್ನಲು ಆಗಲ್ಲ ಅಕ್ಕಿ ಕೊಡುತ್ತೇವೆ ಎಂದಿದ್ದರು. ನಾವು ಈ ವಿಚಾರವಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.
Key words: money- instead – rice – not right-Naleen Kumar Kateel.