ಮೈಸೂರು.ಏ,4,2023(www.justkannada.in): ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಅಂಗವಾಗಿ ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನೀತಿ ಸಂಹಿತೆ ನೋಡಲ್ ಅಧಿಕಾರಿ ಹಾಗೂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯತ್ರಿ ರವರ ಅಧ್ಯಕ್ಷತೆಯಲ್ಲಿ ಬ್ಯಾಂಕ್ ವಹಿವಾಟಿನಲ್ಲಿ ಅನುಸರಿಸಬೇಕಾದ ಕ್ರಮಗಳ ಕುರಿತು ಲೀಡ್ ಬ್ಯಾಂಕ್ ಅಧಿಕಾರಿಗಳ ಸಭೆ ಜರುಗಿತು.
ಜಿಲ್ಲೆಯ ಎಲ್ಲಾ ಬ್ಯಾಂಕ್ ಮ್ಯಾನೇಜರ್ ಗಳ ಜೊತೆ ಮಾತನಾಡಿದ ಅವರು, ಬ್ಯಾಂಕ್ ನಗದು ವ್ಯವಹಾರದ ಮೇಲೆ ನಿಗಾ ಇಡುವ ಮೂಲಕ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನಿರ್ದೇಶನ ನೀಡಿದರು.
SAG ಅಕೌಂಟ್ ಗಳಿಗೆ ಸಾಲ ಮಂಜೂರು ಮಾಡುವ ಸಂಬಂಧ ಚುನಾವಣಾ ಆಯೋಗದಿಂದ ಸ್ಪಷ್ಟೀಕರಣ ಕೇಳಿರುವ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ಬಂದ ನಂತರ ಸಾಲ ಮಂಜೂರು ಮಾಡಲು ಕ್ರಮವಹಿಸುವಂತೆ ಸೂಚಿಸಿದರು.
ಸ್ವೀಪ್ ಕಾರ್ಯಕ್ರಮದ ಅಂಗವಾಗಿ ವೋಟರ್ ರಿಜಿಸ್ಟ್ರೇಷನ್ ಅಪ್ಲಿಕೇಶನ್ ಕುರಿತು ಬ್ಯಾಂಕ್ ಮ್ಯಾನೇಜರ್ ಗಳಿಗೆ ಮಾಹಿತಿ ನೀಡಿದರು.
ಈ ವೇಳೆಯಲ್ಲಿ ಆಯುಕ್ತರು, ಪ್ರಾಚ್ಯ ವಸ್ತು ಮತ್ತು ಸಂಗ್ರಹಾಲಯ, ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಮುಖ್ಯ ಲೆಕ್ಕಾಧಿಕಾರಿಗಳು, ಜಿಲ್ಲಾ ಪಂಚಾಯತ್, ಹಾಗೂ ಮೈಸೂರು ಜಿಲ್ಲೆಯ ಎಲ್ಲಾ ಬ್ಯಾಂಕ್ ವ್ಯವಸ್ಥಾಪಕರು ಹಾಜರಿದ್ದರು.
Key words: Monitor -cash -transactions- mysore-ZP-ceo- KM Gayatri