ಬಲವಾದ ಮಾನ್ಸೂನ್ ಮಾರುತಗಳಿಂದ ಉಂಟಾದ ಹೆಚ್ಚಿನ ತೀವ್ರತೆ ಮಳೆಯಿಂದಾಗಿ ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ಮರುಕಳಿಸುವ ಆತಂಕ ಎದುರಾಗಿದೆ.
ಬಂಗಾಳಕೊಲ್ಲಿಯಲ್ಲಿ ಭಾನುವಾರದ ವೇಳೆಗೆ ಕಡಿಮೆ ಒತ್ತಡದ ವಾತಾವರಣ ನಿರ್ಮಾಣವಾಗಲಿದ್ದು, ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಪರಿಸ್ಥಿತಿ ಅನಿಶ್ಚಿತವಾಗಿದ್ದು, ವಿಶೇಷವಾಗಿ ಮಧ್ಯ ಕೇರಳದಲ್ಲಿ ಉಕ್ಕುತ್ತಿರುವ ನದಿಗಳು ಈಗಾಗಲೇ ಹಲವಾರು ತಗ್ಗು ಪ್ರದೇಶಗಳನ್ನು ಮುಳುಗಿಸಲು ಪ್ರಾರಂಭಿಸಿವೆ.
ಪ್ರವಾಹ ಪೀಡಿತ ಪ್ರದೇಶಗಳಿಂದ ಜನರನ್ನು ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲು ಪ್ರಾರಂಭಿಸಲಾಗಿದೆ. 6,411 ಜನರನ್ನು 221 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ತೀವ್ರ ಮಳೆಯಿಂದಾಗಿ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳು ತುಂಬಿ ಹರಿಯುತ್ತಿದ್ದು, ಆತಂಕಕಾರಿ ಸನ್ನಿವೇಶವನ್ನು ಸೃಷ್ಟಿಯಾಗಿದೆ.