ಬೆಂಗಳೂರು,ಸೆಪ್ಟಂಬರ್,21,2020(www.justkannada.in): 9 ದಿನಗಳ ಕಾಲ ನಡೆಯಬೇಕಿದ್ದ ವಿಧಾನಮಂಡಲ ಅಧಿವೇಶನ ಆರು ದಿನಕ್ಕೆ ಮೊಟಕುಗೊಳಿಸಲು ಸದನ ಕಾರ್ಯಕಲಾಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ನೇತೃತ್ವದಲ್ಲಿ ನಡೆದ ಸದನ ಕಾರ್ಯಕಲಾಪ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ. ಕೊರೋನಾ ಹಿನ್ನೆಲೆ ಸದನ ಕಲಾಪವನ್ನು ಮೂರು ದಿನಕ್ಕೆ ಮೊಟಕುಗೊಳಿಸುವಂತೆ ಆಡಳಿತ ಪಕ್ಷ ಪ್ರಸ್ತಾಪ ಮುಂದಿಟ್ಟಿತು. ಆದರೆ ವಿಪಕ್ಷ ನಾಯಕರು ಸದನ ಕಲಾಪವನ್ನು ಆರು ದಿನಗಳವರೆಗೆ ನಡೆಸುವಂತೆ ಒತ್ತಾಯಿಸಿದರು.
ಹೀಗಾಗಿ ಆರು ದಿನಗಳ ಕಾಲ ವಿಧಾನಸಭೆ ಕಲಾಪ ನಡೆಸಲು ತೀರ್ಮಾನಿಸಲಾಯಿತು. ಸೆಪ್ಟಂಬರ್ 26 ಶನಿವಾರದಂದು ವಿಧಾನಸಭೆ ಕಲಾಪ ಮುಕ್ತಾಯವಾಗಲಿದೆ. ಸಭೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ಧರಾಮಯ್ಯ, ಕಲಾಪ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
Key words: Monsoon -session – reduced – six days-meeting