ಬೆಂಗಳೂರು, ಡಿಸೆಂಬರ್,18,2023(www.justkannada.in): ಇತ್ತೀಚೆಗೆ ಬೆಂಗಳೂರಿನ ವಿವಿಧೆಡೆ ದಾಳಿ ನಡೆಸಿದ್ದ ಎನ್ ಐಎ(ರಾಷ್ಟ್ರೀಯ ತನಖಾ ದಳ) ಇದೀಗ ಮತ್ತೆ ನಗರದ 20ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಎನ್ ಐಎ ದಾಳಿ ನಡೆಸಿ ಶಂಕಿತ ಉಗ್ರ ಅಲಿ ಅಬ್ಬಾಸ್ನನ್ನು ಬಂಧಿಸಿತ್ತು. ಇದೀಗ ಮತ್ತೆ ಎನ್ ಐಎ ಅಧಿಕಾರಿಗಳು ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.
ಉಗ್ರ ಸಂಘಟನೆ ಐಸಿಸ್ ಜೊತೆ ಸಂಪರ್ಕ ಶಂಕೆ ಹಿನ್ನೆಲೆ ಡಿಸೆಂಬರ್ 9 ರಂದು ಪುಲಿಕೇಶಿನಗರದಲ್ಲಿರುವ ಮೋರ್ ರಸ್ತೆಯ ಅಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಿದ್ದ ಎನ್ಐಎ, 16 ಲಕ್ಷಕ್ಕೂ ಹೆಚ್ಚು ನಗದು ಹಾಗೂ ಲ್ಯಾಪ್ ಟಾಪ್, ಪೆನ್ ಡ್ರೈವ್ ಜಪ್ತಿ ಮಾಡಿದ್ದರು. ಅದರಂತೆ ಅಲಿ ಅಬ್ಬಾಸ್ ಮೊಬೈಲ್, ಲ್ಯಾಪ್ ಟಾಪ್ ರಿಟ್ರೀವ್ ಮಾಡಲಾಗಿತ್ತು. ಈ ವೇಳೆ ಮಹತ್ವದ ಮಾಹಿತಿ ಕಲೆ ಹಾಕಿದ್ದ ಎನ್ಐಎ ಅಧಿಕಾರಿಗಳು, ಇಂದು ಮತ್ತೆ ನಗರದ ಹಲವೆಡೆ ದಾಳಿ ನಡೆಸಿದ್ದಾರೆ.
Key words: More than- 20 places – Bengaluru- raided – NIA