ಗ್ರಾಪಂ ಚುನಾವಣೆಗಳಲ್ಲಿ ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ : ಸಚಿವ ಸೋಮಶೇಖರ್ ವಿಶ್ವಾಸ

ಬೆಂಗಳೂರು,ಡಿಸೆಂಬರ್,06,2020(www.justkannada.in) : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಆಗಿರುವ ಅರುಣ್ ಸಿಂಗ್ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸಹಕಾರ ಹಾಗೂ ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ಮಾಡಿ ಅಭಿನಂದಿಸಿದರು.

logo-justkannada-mysore

ಇದೇ ವೇಳೆ ಭಾರತದ ಸಂವಿಧಾನ ಕೃತಿಯನ್ನು ನೀಡಿ ಗೌರವಿಸಿದರು. ಜೊತೆಗೆ ಗ್ರಾಮ ಸ್ವರಾಜ್ಯ ಸಮಾವೇಶದ ಬಗ್ಗೆ ಮಾಹಿತಿ ನೀಡಿ, ಕಾವೇರಿ ಕೊಳ್ಳದ ಪ್ರಾಂತ್ಯ ಹಾಗೂ ಹಳೇ ಮೈಸೂರು ಭಾಗದಲ್ಲಿ ಪ್ರಸಕ್ತ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನವನ್ನು ಗೆಲ್ಲಲಿದ್ದಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು.

ಕಂದಾಯ ಸಚಿವ ಆರ್.ಅಶೋಕ್ ಅವರ ನೇತೃತ್ವದಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಮೈಸೂರು ವಿಭಾಗದಲ್ಲಿ ನಡೆಸಲಾಗಿದ್ದು, ತಮ್ಮನ್ನು ಸಹಿತ ಪೌರಾಡಳಿತ ಸಚಿವ ನಾರಾಯಣ್ ಗೌಡ,  ಆಹಾರ ಸಚಿವ ಗೋಪಾಲಯ್ಯ, ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್ ಹಾಗೂ ಬಿಜೆಪಿ ಎಸ್ಸಿ ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರ ತಂಡದೊಂದಿಗೆ ಪ್ರತಿ ಜಿಲ್ಲೆಗೆ ಭೇಟಿ ನೀಡಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದೇವೆ ಎಂದು ಮಾಹಿತಿ ನೀಡಿದರು.

ಗ್ರಾಮ ಸ್ವರಾಜ್ಯ ಕಾರ್ಯಕ್ರಮದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಈ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬರಲಿದ್ದಾರೆ ಎಂದರು.

Most-BJP-backed-candidates-Mysore-region- Grammar-elections-Minister-Somashekhar-Confidence

ಮೈಸೂರು ವಿಭಾಗದಲ್ಲಿ ನವೆಂಬರ್28 ರಿಂದ ಡಿಸೆಂಬರ್ 02 ರವರೆಗೆ ಒಟ್ಟು 5 ಜಿಲ್ಲೆಗಳಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮಕ್ಕಾಗಿ ಪ್ರವಾಸ ಮಾಡಿದ್ದೇವೆ. ಒಟ್ಟು 9 ಸಮಾವೇಶಗಳನ್ನು ನಡೆಸಿದ್ದು, 40 ಮಂಡಲಗಳು ಭಾಗಿಯಾಗಿವೆ. ಈ ಕಾರ್ಯಕ್ರಮಗಳಲ್ಲಿ 3946 ಶಕ್ತಿ ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಭಾಗವಹಿಸಿದ್ದರು. ಒಟ್ಟಾರೆಯಾಗಿ 1210 ಕಿಲೋಮೀಟರ್ ದೂರವನ್ನು ಕ್ರಮಿಸಿದಂತಾಗಿದೆ ಎಂದು ಸಚಿವ ಸೋಮಶೇಖರ್ ಮಾಹಿತಿ ನೀಡಿದರು.

ಕರ್ನಾಟಕ ಸಹ ಉಸ್ತುವಾರಿಯಾದ ಡಿ.ಕೆ.ಅರುಣಾ, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು ಹಾಗೂ ರವಿಕುಮಾರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Most-BJP-backed-candidates-Mysore-region- Grammar-elections-Minister-Somashekhar-Confidence

key words :Most-BJP-backed-candidates-Mysore-region- Grammar-elections-Minister-Somashekhar-Confidence