ಚಾಮರಾಜನಗರ ,ಏಪ್ರಿಲ್,5,2024 (www.justkannada.in): ಬಟ್ಟೆ ತೊಳೆಯಲು ಹೋಗಿದ್ದ ವೇಳೆ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಗುಂಡಲ್ ಜಲಾಶಯದಲ್ಲಿ ನಡೆದಿದೆ.
ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪುದೂರು ಗ್ರಾಮದ ನಿವಾಸಿ ಮೀನಾ (33) ಪವಿತ್ರ (13) ಕೀರ್ತಿ (12) ಮೃತಪಟ್ಟವರು. ಇಂದು ಮಧ್ಯಾಹ್ನ ಗುಂಡಲ್ ಜಲಾಶಯಕ್ಕೆ ಮೂವರು ಬಟ್ಟೆ ತೊಳೆಯಲು ಹೋಗಿದ್ದರು.
ಈ ವೇಳೆ ಮೀನಾ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದು ತಾಯಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದನ್ನು ಕಂಡ ಮಕ್ಕಳು ರಕ್ಷಿಸಲು ಮುಂದಾಗಿದ್ದಾರೆ. ನಂತರ ನೀರಿನಿಂದ ಹೊರಗೆ ಬರಲು ಆಗದೇ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Key words: Mother, children, death