ಬೆಂಗಳೂರು ,ಡಿಸೆಂಬರ್,12,2024 (www.justkannada.in): ತಾಯಿಯೊಬ್ಬಳು ಎರಡು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಕೋಡಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕುಸುಮ (35) ಆತ್ಮಹತ್ಯೆಗೆ ಶರಣಾದ ತಾಯಿ . 6 ವರ್ಷದ ಮಗು ಹಾಗೂ 7 ವರ್ಷದ ಮಗಳನ್ನು ಕೊಂದು ಬಳಿಕ ಕುಸುಮ ಆತ್ಮಹತ್ಯೆಗೆ ಶರಣಾಗಿರುವ ಮಾಹಿತಿ ಲಭ್ಯವಾಗಿದೆ.
ಕೌಟುಂಬಿಕ ಕಲಹಕ್ಕೆ ಮನನೊಂದು ಡೆತ್ ನೋಟ್ ಬರೆದಿಟ್ಟು ಕುಸುಮ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ದಿನಗಳ ಹಿಂದೆ ಪತಿಯೊಂದುಗೆ ಜಗಳ ಮಾಡಿಕೊಂಡು, ಮನನೊಂದ ಕುಸುಮ ಡೆತ್ ನೋಟ್ ನಲ್ಲಿ ನಮ್ಮ ಸಾವಿಗೆ ನಾವೇ ಕಾರಣ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ
ಈ ಕುರಿತು ಕೊಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Key words: Mother kills, two children, commits, suicide