ಚಾಮರಾಜನಗರ,ಜುಲೈ,12,2023(www.justkannada.in): ಕೌಟುಂಬಿಕ ಕಲಹ ಹಿನ್ನೆಲೆ ಮಕ್ಕಳಿಗೆ ವಿಷಕುಡಿಸಿ ತಾಯಿ ಆತ್ಮಹತ್ಯೆಗೆ ಯತ್ನಸಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ವೇಳೆ ಓರ್ವ ಮಗು ಸಾವನ್ನಪ್ಪಿದೆ.
ಮಧುವನಹಳ್ಳಿ ಗ್ರಾಮದ ಶೀಲಾ ತನ್ನ ಮಕ್ಕಳು ಯಶ್ವಂತ್ ಮತ್ತು ಸಿಂಧುಗೆ ವಿಷಕುಡಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆರು ವರ್ಷದ ಸಿಂಧು ಮೃತಪಟ್ಟಿದ್ದಾಳೆ. ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ತಾಯಿ ಶೀಲ ಹಾಗೂ ಮಗು ಯಶವಂತ್ ಚಿಕಿತ್ಸೆ ಮುಂದುವರೆದಿದೆ.
ಪ್ರತಿದಿನ ಕುಡಿದು ಬಂದು ಪತ್ನಿ ಶೀಲ ಜೊತೆಗೆ ಪತಿ ಜಗಳವಾಡುತ್ತಿದ್ದ. ಇದರಿಂದ ಮನನೊಂದು ಮಕ್ಕಳಿಗೆ ವಿಷ ಕುಡಿಸಿ ತಾಯಿ ಶೀಲ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Key words: Mother -tries – commit suicide – poisoning –children