ನವದೆಹಲಿ,ಸೆ,25,2019(www,justkannada.in): ಅಕ್ರಮ ಹಣ ವರ್ಗಾವಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ಕುರಿತು ಇಂದು ಆದೇಶ ಹೊರ ಬೀಳಲಿದ್ದು ಈ ಮಧ್ಯೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಸಂಸದ ಡಿ.ಕೆ ಸುರೇಶ್ ಭೇಟಿಯಾಗಿ ಚರ್ಚಿಸಿದ್ದಾರೆ.
ಇಂದು ಮಧ್ಯಾಹ್ನ 3.30ಕ್ಕೆ ನವದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಡಿ.ಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ಬಗ್ಗೆ ಆದೇಶ ನೀಡಲಿದೆ. ಈ ಹಿನ್ನೆಲೆ ಇಂದು ನವದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್,ಡಿ ದೇವೇಗೌಡರನ್ನ ಡಿ.ಕೆ ಶಿವಕುಮಾರ್ ಸಹೋದರ ಡಿ.ಕೆ ಸುರೇಶ್ ಭೇಟಿಯಾಗಿ ಕಾನೂನು ಸಮರದ ಬಗ್ಗೆ ಚರ್ಚೆ ನಡೆಸಿದ್ದಾರೆ.
ಈ ಹಿಂದೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಕಾನೂನು ಸಮರದ ಬಗ್ಗೆ ಸಲಹೆ ಪಡೆದಿದ್ದರು. ಇದೀಗ ಅಣ್ಣನ ಅನುಪಸ್ಥಿತಿಯಲ್ಲಿ ಸಂಸದ ಡಿ.ಕೆ ಸುರೇಶ್ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಚರ್ಚಿಸಿದ್ದಾರೆ.
Key words: MP -DK Suresh -met –discussed- former Prime Minister -HD Deve Gowda