ಕೇಂದ್ರ ಸಚಿವ ಸ್ಥಾನಕ್ಕೆ ನಾನು ಒತ್ತಡ ಹಾಕುತ್ತಿಲ್ಲ- ನೂತನ ಸಂಸದ ಹೆಚ್.ಡಿ ಕುಮಾರಸ್ವಾಮಿ.

ನವದೆಹಲಿ,ಜೂನ್,7,2024 (www.justkannada.in): ಕೇಂದ್ರ ಸಚಿವ ಸ್ಥಾನದ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ. ಕೇಂದ್ರ ಸಚಿವ ಸ್ಥಾನಕ್ಕೆ ಒತ್ತಡ ಹಾಕುತ್ತಿಲ್ಲ ಎಂದು ನೂತನ ಸಂಸದ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಈ ಕುರಿತು ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನರೇಂದ್ರ ಮೋದಿ ನಾಯಕತ್ವದಲ್ಲಿ ಮತ್ತೆ ಸರ್ಕಾರ ಎಂಬ ಮಾಹಿತಿ ಇದೆ. ನಮಗೂ ಸಹ ಸಚಿವ ಸ್ಥಾನ ನೀಡಲಿದ್ದಾರೆ ಎಂಬ ಮಾಹಿತಿ ಇದೆ. ನಮ್ಮಿಂದ ಒಳ್ಳೆ ಕೆಲಸ ಮಾಡಿಸಲು ಸಾಧ್ಯ ಎಂಬದು ವರಿಷ್ಠರಿಗೆ ಗೊತ್ತಿದೆ. ರಾಜ್ಯದ ಜನರಿಗೂ ಸಹ ಒಂದು ವಿಶ್ವಾಸ ಇದೆ ಎಂದರು.

ಮಂತ್ರಿ ಸ್ಥಾನ ಕೊಟ್ಟರೇ ನಿಭಾಯಿಸುವೆ.  ಮಂತ್ರಿಸ್ಥಾನ ನೀಡಿದ್ರೆ ಉತ್ತಮ ಕೆಲಸ ಮಾಡುತ್ತೇನೆ. ನಾಡಿನ ಜನತೆಗೆ ಒಳ್ಳೆಯದಾಗುವ ಖಾತೆ ಸಿಕ್ಕಿದರೆ ಉತ್ತಮ ಕೆಲಸ ಮಾಡುವೆ. ಮಂಜುನಾಥ್​ಗೆ ಖಾತೆ ನೀಡುವ ಬಗ್ಗೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ನನಗೆ ಮಂತ್ರಿ ಗಿರಿ ಕೊಡಬೇಕು ಎಂದು ಒತ್ತಡ ಹಾಕುತ್ತಿಲ್ಲ. ಬಿಜೆಪಿ ವರಿಷ್ಠರು ನೀಡಿದರೆ ಜವಾಬ್ದಾರಿ ನಿರ್ವಹಿಸುತ್ತೇನೆ ಅಷ್ಟೇ ಎಂದು ಕುಮಾರಸ್ವಾಮಿ ಹೇಳಿದರು.

Key words: MP, HD Kumaraswamy, minister, position