ಹಾಸನ,ಜುಲೈ,19,2022(www.justkannada.in): ಆನೆ ಹಂತಕರಿಗೆ ರಕ್ಷಣೆಗೆ ಸಂಸದ ಪ್ರಜ್ವಲ್ ರೇವಣ್ಣ ಒತ್ತಡ ಹೇರಿದ್ದಾರೆಂದು ಆರೋಪಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಸಂಸದೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ.
ಆನೆಯನ್ನು ಕೊಂದು ದಂತವನ್ನ ಮಾರಾಟ ಮಾಡಲು ಯತ್ನಿಸಿ ಸಿಕ್ಕಿಬಿದ್ದ ಆರೋಪಿಗಳ ರಕ್ಷಣೆಗೆ ಒತ್ತಡ ಹೇರಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪಿಸಿ ಸಂಸದೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ.
ಆರೋಪಿಗಳು ಜಿಲ್ಲೆಯಲ್ಲಿ ಅಕ್ರಮವಾಗಿ ವಿದ್ಯುತ್ ಹರಿಸಿ ಸಲಗ ಕೊಂದು ಹೂತಿದ್ದರು. ಬಳಿಕ ಸತ್ತ ಆನೆಯಿಂದ ದಂತ ಕತ್ತರಿಸಿ ಮಾರಾಟ ಮಾಡಲು ಯತ್ನಿಸುವ ವೇಳೆ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದ್ದರು. ಈ ಪ್ರಕರಣ ದಾಖಲಿಸಿಕೊಂಡಿರುವ ಅರಣ್ಯ ಇಲಾಖೆ ತನಿಖೆ ನಡೆಸುತ್ತಿದೆ. ಆದರೆ ಪ್ರಕರಣದ ಆರೋಪಿಗಳನ್ನ ರಕ್ಷಣೆ ಮಾಡುವಂತೆ ಪ್ರಜ್ವಲ್ ರೇವಣ್ಣ ಒತ್ತಾಯಿಸುತ್ತಿದ್ದಾರೆ ಎಂದು ಆರೋಪಿಸಿ ಸಿಎಂ ಬಸವರಾಜ ಬೊಮ್ಮಾಯಿಗೆ ಮನೇಕಾ ಗಾಂಧಿ ಪತ್ರ ಬರೆದಿದ್ದಾರೆ.
ವೀರಾಪುರ ಗ್ರಾಮದಲ್ಲಿ ಚಂದ್ರೆಗೌಡ ಎಂಬ ವ್ಯಕ್ತಿ ಆನೆಯನ್ನ ಕೊಂದಿದ್ದ. ಬಳಿಕ ಮಾರ್ಚ್ 19 ರಂದು ದಂತ ಮಾರಾಟ ಮಾಡುವ ವೇಳೆ ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸರಿಗೆ ಸಿಕ್ಕಿಬಿದ್ದಿದ್ದರು. ಪ್ರಕರಣದಲ್ಲಿ ಆರೋಪಿಗಳ ರಕ್ಷಣೆ ಮಾಡಲು ಹಾಸನ ಅರಣ್ಯ ಇಲಾಖೆ ಆರ್ ಎಫ್ಓ ಪ್ರಯತ್ನ ಮಾಡಿದ್ದಾರೆ. ಅಚ್ಚುಕಟ್ಟು ಪ್ರದೇಶದ ಪೊಲೀಸರಿಗೆ ಒತ್ತಡ ಹಾಕಿದ್ದಾರೆ. ಆರೋಪಿಗಳು ತಮ್ಮ ಪಾರ್ಟಿಯ ಬೆಂಬಲಿಗರು ಎನ್ನುವ ಕಾರಣಕ್ಕೆ ಅವರ ಪರವಾಗಿ ಸಂಸದ ಪ್ರಜ್ವಲ್ ರೇವಣ್ಣ ಒತ್ತಡ ಹಾಕುತ್ತಿದ್ದಾರೆ ಎಂದು ಮನೇಕಾ ಗಾಂಧಿ ದೂರು ನೀಡಿದ್ದಾರೆ. ಹಾಗೇ ತಕ್ಷಣ ಸಿಎಂ ಮಧ್ಯ ಪ್ರವೇಶಿಸಿ ನಿಷ್ಪಕ್ಷಪಾತ ರೀತಿಯಲ್ಲಿ ತನಿಕೆ ನಡೆಸಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
Key words: MP -Maneka Gandhi – letter – CM Bommai- against -Prajwal Revanna.
ENGLISH SUMMARY…
MP Maneka Gandhi writes to CM Bommai against Prajwal Revanna
Hassan, July 19, 2022 (www.justkannada.in): MP Maneka Gandhi has written a letter to the Chief Minister Basavaraj Bommai alleging MP Prajwal Revanna of pressurizing to protect a few criminals who killed an elephant.
In the letter, Maneka Gandhi alleged that the MP Prajwal Revanna has pressurized the authorities concerned to protect the criminals who have been held while selling the elephant tusks after killing it.
“An elephant lost its life due to the illegal electrical fence put up by some miscreants. After the elephant died, the miscreants severed the tusks and tried to sell it. They were held red-handedly in Bengaluru while trying to sell the elephant tusks. The Forest Department has registered a complaint and investigated. But MP Prajwal Revanna is trying to protect the miscreants,” Maneka Gandhi alleged in the letter written to Chief Minister Bommai.
A person named Chandregowda had killed a tusker at Veerapura Village. He was caught red-handedly by the police while he was trying to sell the tusks on March 19 at C.K. Achukattu in Bengaluru. The Forest Department Hassan RFO is trying to protect the guilty in this case by bringing pressure on the Achchukattu police. They are doing so because the guilty belong to their party, Maneka Gandhi’s letter read.
She has requested the Chief Minister to interfere immediately and help the forest department officials to carry on an unbiased investigation.
Keywords: MP Maneka Gandhi/ Hassan/ Prajwal Revanna/ Tusker/ elephant killed