ಮೈಸೂರು,ಜೂನ್,13,2023(www.justkannada.in): ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಟೋಲ್ ದರ ಏರಿಕೆಯಾಗಿರುವ ಕುರಿತು ಸಂಸದ ಪ್ರತಾಪ್ ಸಿಂಹ ಸಮರ್ಥನೆ ಮಾಡಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳವಾಗುವುದು ಸಹಜ. ಬೆಂಗಳೂರು- ಮೈಸೂರು ಹೈವೆಗೆ ಏಪ್ರಿಲ್ ನಲ್ಲಿ ಟೋಲ್ ಹೆಚ್ಚಳ ಆಗಬೇಕಿತ್ತು. ಆದರೆ ಆಗ ಆಗಿರಲಿಲ್ಲ. ಈಗ ಶೇ.22ರಷ್ಟು ಏರಿಕೆ ಆಗಿದೆ. ಟೋಲ್ ಸಂಗ್ರಹದ ಆರಂಭದಲ್ಲಿ ಫಾಸ್ಟ್ ಟ್ಯಾಗ್ ಸಮಸ್ಯೆ ಇತ್ತು, ಈಗ ಸಮಸ್ಯೆ ಇಲ್ಲ. ಫಾಸ್ಟ್ ಟ್ಯಾಗ್ ಇರದಿದ್ದರೆ ಡಬಲ್ ಚಾರ್ಜ್ ಕಟ್ಟುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.
ವಿದ್ಯುತ್ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, ಗುತ್ತಿಗೆದಾರರ ಅನುದಾನ ಬಿಡುಗಡೆ ಆದೇಶಕ್ಕೆ ತಡೆ ಹಿಡಿಯುತ್ತೀರಿ. ಆದರೆ ವಿದ್ಯುತ್ ಬಿಲ್ ಏರಿಕೆ ಆದೇಶಕ್ಕೆ ಏಕೆ ತಡೆ ನೀಡಲ್ಲ. ಕಾಂಗ್ರೆಸ್ನವರು ಲೂಟಿ ಮಾಡಲು ಬಂದಿದ್ದಾರೆ. ಜನ ವಿರೋಧಿ ಮುಖ ಮರೆಮಾಚಲು ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಬಿಜೆಪಿ ಬಗ್ಗೆ ಜನರಿಗೆ ಅಸಮಾಧಾನವಿತ್ತು,ಅದ್ದರಿಂದ ತಿರಸ್ಕರಿಸಿದ್ದಾರೆ ಕಾಂಗ್ರೆಸ್ ನ ಗ್ಯಾರಂಟಿಗಳನ್ನು ನೋಡಿ ರಾಜ್ಯದ ಜನ ಮತ ಹಾಕಿದ್ದಾರೆ. ಕೆಲವು ಮುಖಂಡರಿಂದ ಬಿಜೆಪಿಯವರು ಮಣ್ಣು ತಿಂದಿದ್ದು ಆಗಿದೆ. ಬಿಜೆಪಿ, ಮನುವಾದ, RSS ಎಂದು ವಿಷಯಾಂತರ ಮಾಡಬೇಡಿ ಎಂದು ಪ್ರತಾಪ್ ಸಿಂಹ ಹೇಳಿದರು.
Key words: MP- Pratap Sinha- justification – increase – toll rate -Bangalore-Mysore-Highway.