ಬೆಂಗಳೂರು,ಜೂ,14,2019(www.justkannada.in): ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹೆಚ್.ವಿಶ್ವನಾಥ್ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಮೂಡಿಸಿದೆ. ಈ ನಡುವೆ ಹೆಚ್.ವಿಶ್ವನಾಥ್ ಬಿಜೆಪಿ ಸೇರುವ ಬಗ್ಗೆಯೂ ಸುದ್ದಿಗಳು ಹರಡಿವೆ. ಈ ಕುರಿತು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.
ಹೆಚ್.ವಿಶ್ವನಾಥ್ ಬಿಜೆಪಿ ಸೇರ್ತಾರೆ ಎಂದು ಹೇಳಲು ಆಗಲ್ಲ. ನಮ್ಮಲ್ಲಿ ಹಿರಿಯ ನಾಯಕರು ಇದ್ದಾರೆ. ಹೆಚ್.ವಿಶ್ವನಾಥ್ ಮುಂದೆ ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡಬೇಕು ಎಂದು ವಿ. ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ಇಂದು ಹೆಚ್.ವಿಶ್ವನಾಥ್ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನ ಭೇಟಿ ಮಾಡಿ ಚರ್ಚಿಸಿದರು.
ಭೇಟಿ ಬಳಿಕ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ಹೆಚ್.ವಿಶ್ವನಾಥ್ ಅವರಿಗೆ ಸಿದ್ದರಾಮಯ್ಯ ತೊಂದರೆ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ವಿಶ್ವನಾಥ್ ಸೋತ ಬಳಿಕ ಅವರನ್ನ ಕಾಂಗ್ರೆಸ್ ತಿರಸ್ಕರಿಸಿತು. ಹೀಗಾಗಿ ಅವರು ಜೆಡಿಎಸ್ ಸೇರ್ಪಡೆಗೊಂಡರು. ನನ್ನ ಸೋಲಿಗೂ ಸಿದ್ದರಾಮಯ್ಯ ಕಾರಣ. ಹೆಚ್.ವಿಶ್ವನಾಥ್ ಮತ್ತು ನಾನು ಸಿದ್ದರಾಮಯ್ಯರಿಂದ ಅಂತರ ಕಾಯ್ದುಕೊಂಡವರು ಎಂದು ತಿಳಿಸಿದರು.
ಇನ್ನು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅತಂತ್ರ ಸ್ಥಿತಿಯಲ್ಲಿದೆ. ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಲ್ಲಿ ಗ್ರಾಮವಾಸ್ತವ್ಯ ಮಾಡಲು ಹೋಗಿದ್ದಾರೆ ಎಂದು ಟೀಕಿಸಿದರು.
Key words: MP V. Srinivas Prasad- about -H Viswanath- next move