ಮೈಸೂರು,ಜನವರಿ,2,2025 (www.justkannada.in): ಮೈಸೂರಿನ ಪಿಕೆಟಿಬಿ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂಬ ಹೆಸರಿರುವ ಬಗ್ಗೆ ಪಾಲಿಕೆ ಆಯುಕ್ತರಿಗೆ ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದಾಖಲೆ ಸಲ್ಲಿಸಿದ್ದಾರೆ.
ಪಿಕೆಟಿಬಿ ರಸ್ತೆಗೆ ಪ್ರಿನ್ಸಸ್ ರಸ್ತೆ ಎಂಬ ಹೆಸರಿರುವ ಬಗ್ಗೆ ದಾಖಲೆಗಳಿಲ್ಲ ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಪಾಲಿಕೆ ಆಯುಕ್ತರನ್ನ ಭೇಟಿಯಾದ ಸಂಸದ ಯದುವೀರ್, ಪ್ರಿನ್ಸಸ್ ರಸ್ತೆ ಎಂಬುದಕ್ಕೆ ಹಲವು ದಾಖಲೆಗಳನ್ನ ಸಲ್ಲಿಕೆ ಮಾಡಿ, ಹೆಸರು ಬದಲಾವಣೆ ಕೈ ಬಿಡುವಂತೆ ಮನವಿ ಮಾಡಿದರು. ಈ ಬಗ್ಗೆ ಪುನರ್ ಪರಿಶೀಲನೆ ನಡೆಸುವಂತೆ ಸಲಹೆ ನೀಡಿದರು. ಇದಕ್ಕೆ ಪಾಲಿಕೆ ಆಯುಕ್ತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ.
ಪಾಲಿಕೆ ಆಯುಕ್ತರ ಭೇಟಿ ಬಳಿಕ ಮಾತನಾಡಿದ ಸಂಸದ ಯದುವೀರ್, ಪ್ರಿನ್ಸಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡಲು ಹೊರಟಿದ್ದಾರೆ. ಈ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಪ್ರಿನ್ಸಸ್ ರಸ್ತೆಗೆ ಯಾವುದೇ ದಾಖಲೆ ಇಲ್ಲ ಎಂದಿದ್ರು. ಅದಕ್ಕೆ ಪೂರಕವಾದ ದಾಖಲೆ ಸಂಗ್ರಹ ಮಾಡಿದ್ದೆವು. ಎಲ್ಲಾ ದಾಖಲೆಗಳನ್ನ ಪಾಲಿಕೆ ಆಯುಕ್ತರಿಗೆ ಸಲ್ಲಿಸಿದ್ದೇವೆ. ಇದು ರಾಜಕೀಯ ಉದ್ದೇಶದಿಂದ ಕೂಡಿದೆ. ಸಿದ್ದರಾಮಯ್ಯನವರು ಮುಡಾ A1 ಆರೋಪಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಯಾವುದೇ ರಸ್ತೆಗೂ ಅವರ ಹೆಸರು ಇಡಬಾರದು. ಕಳಂಕಿತ ಸ್ಥಾನದಲ್ಲಿರುವವರ ಹೆಸರು ಇಡುವ ಬಗ್ಗೆ ಕಾಂಗ್ರೆಸ್ ನವರೇ ಆತ್ಮವಲೋಕನ ಮಾಡಿಕೊಳ್ಳಬೇಕು. ಪ್ರಸ್ತುತ ಪಾಲಿಕೆಯಲ್ಲಿ ಪಾಲಿಕೆ ಸದಸ್ಯರು ಇಲ್ಲ, ಚುನಾವಣೆ ನಡೆದಿಲ್ಲ. ಈ ವೇಳೆ ಕೌನ್ಸಿಲ್ ನಿರ್ಣಯವಿಲ್ಲದೆ ಮಹತ್ವದ ನಿರ್ಧಾರ ಕೈಗೊಳ್ಳಬಾರದು. ನಗರಪಾಲಿಕೆ ಸದಸ್ಯರಿಲ್ಲದಿರುವಾಗ ರಸ್ತೆಯ ನಾಮಕರಣಕ್ಕೆ ಮುಂದಾಗಿರೋದು ಸರಿಯಲ್ಲ. ಅಧಿಕಾರಿಗಳ ವರ್ತನೆ ಸರಿಯಿಲ್ಲ ಎಂದು ಆಕ್ಷೇಪಿಸಿದರು.
Key words: MP, Yaduveer, several documents, Princess Road