MUDA CASE: ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಾಳೆ.

MUDA CASE: Appeal filed by Chief Minister Siddaramaiah to be heard tomorrow.

 

ಬೆಂಗಳೂರು, ಜ.೨೪, ೨೦೨೫: (www.justkannada.in news)  ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ಎತ್ತಿ ಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಶನಿವಾರ (ಜ.25) ನಡೆಯಲಿದೆ.

‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದ ಆರೋಪಕ್ಕೆ ಸಂಬಂಧಿಸಿದಂತೆ ಈ ಬೆಳವಣಿಗೆ ನಡೆದಿತ್ತು.

ಇದೇ ವೇಳೆ ನಾಳೆ, ಸಿಎಂ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಭೂಮಾಲೀಕ ದೇವರಾಜ್‌ ಅವರ ಅರ್ಜಿ ಸಹ ವಿಚಾರಣೆಗೆ ಬರಲಿದೆ.

ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ವಿವಾದಿತ ಜಮೀನನ್ನು ಮುಖ್ಯಮಂತ್ರಿ  ಭಾಮೈದ ಮಲ್ಲಿಕಾರ್ಜುನಸ್ವಾಮಿಗೆ ಮಾರಾಟ ಮಾಡಿದ್ದ ಭೂಮಾಲೀಕ ಜೆ. ದೇವರಾಜು ಸಲ್ಲಿಸಿರುವ ಎರಡು ಪ್ರತ್ಯೇಕ ಕ್ರಿಮಿನಲ್ ಮೇಲ್ಮನವಿಗಳ ವಿಚಾರಣೆ ನಾಳೆ, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠದದಲ್ಲಿ ನಡೆಯಲಿದೆ.

ಸಿಎಂ ವಿರುದ್ಧ ವಿಚಾರಣೆಗೆ ಆದೇಶಿಸಿ ಸೆ.24ರಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸಿಎಂ ಮೇಲ್ಮನವಿ ಸಲ್ಲಿಸಿದ್ದಾರೆ. ಸಂಬಂಧವಿಲ್ಲದಿದ್ದರೂ ನನ್ನನ್ನು ಪ್ರಕರಣದಲ್ಲಿ ಎಳೆದು ತರಲಾಗಿದೆ ಎಂದು ಆಕ್ಷೇಪಿಸಿ ದೇವರಾಜು ಮೇಲ್ಮನವಿ ಸಲ್ಲಿಸಿದ್ದಾರೆ.

key words: MUDA CASE, Appeal filed, Chief Minister Siddaramaiah, high court

MUDA CASE: Appeal filed by Chief Minister Siddaramaiah to be heard tomorrow.