ಸಿಎಂ ಸಿದ್ದರಾಮಯ್ಯ ವಿರುದ್ದ ಮುಡಾ ಕೇಸ್: ವಿಚಾರಣೆ ಫೆ.24ಕ್ಕೆ ಮುಂದೂಡಿಕೆ

ಬೆಂಗಳೂರು,ಫೆಬ್ರವರಿ,17,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿಕೆ ಮಾಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅಂತಿಮ ವರದಿಯನ್ನು ಸಲ್ಲಿಸಲು ಎರಡರಿಂದ ಮೂರು ದಿನಗಳ ಕಾಲಾವಧಿ ನೀಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಲೋಕಾಯುಕ್ತ  ಎಸ್ ಪಿಪಿ ವೆಂಕಟೇಶ್ ಮನವಿ ಮಾಡಿದರು.

ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ನೀಡಿ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿಕೆ ಮಾಡಿದ್ದಾರೆ.

Key words: Muda case, CM Siddaramaiah, Court, Adjourned, Hearing