ಬೆಂಗಳೂರು,ಏಪ್ರಿಲ್,15,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಅಂತಿಮ ತನಿಖಾ ವರದಿ ಸಲ್ಲಿಸುವವರೆಗೆ ಬಿ ರಿಪೋರ್ಟ್ ಬಗ್ಗೆ ಆದೇಶವಿಲ್ಲ ಎಂದು ಹೇಳಿರುವ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಯನ್ನ ಮುಂದುವರೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.
ಲೋಕಾಯುಕ್ತ ನೀಡಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಇಡಿ ಮೇಲ್ಮನವಿಯನ್ನ ಸಲ್ಲಿಸಿದ್ದರು. ಈ ಮಧ್ಯೆ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.
ಹಾಗೆಯೇ ದೂರುದಾರ ಸ್ನೇಹಮಯಿ ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್, ಇದೀಗ ಲೋಕಾಯುಕ್ತ ಪೊಲೀಸರಿಗೆ ತನಿಖೆ ಮುಂದುವರೆಸಿ ಅಂತಿಮ ವರದಿ ಸಲ್ಲಿಸಲು ಸೂಚಿಸಿದ್ದು, ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿಕೆ ಮಾಡಿದ್ದಾರೆ.
ಅಲ್ಲದೆ ಅಂತಿಮ ವರದಿ ಬರುವವರೆಗೂ ಬಿ ರಿಪೋರ್ಟ್ ಬಗ್ಗೆ ನಿರ್ಧರಿಸಲ್ಲ. ಇಡಿ ಕೂಡ ತಕರಾರು ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ. ತನಿಖೆ ಮುಂದುವರೆಸಲು ಲೋಕಾಯುಕ್ತ ಪೊಲೀಸರು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಇದೀಗ ತನಿಖೆ ಮುಂದುವರೆಸಲು ಕೋರ್ಟ್ ಅನುಮತಿ ನೀಡಿದೆ.
Key words: Muda case, CM Siddaramaiah, B report, Court