ಸಿಎಂಗೆ ಮತ್ತೆ ಮುಡಾ ಸಂಕಷ್ಟ: ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಅರ್ಜಿ ಸಲ್ಲಿಸಿದ ಇಡಿ

ಮೈಸೂರು,ಏಪ್ರಿಲ್,2,2025 (www.justkannada.in): ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೌದು ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಜನಪ್ರತಿನಿಧಿಗಳ ನ್ಯಾಯಲಯಕ್ಕೆ  ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿದಂತೆ ಕುಟುಂಬ ಸದಸ್ಯರು ಭಾಗಿಯಾಗಿದ್ದಾರೆ ಎಂದು ಆರೋಪಿಸಲಾದ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಕೋರ್ಟ್ ಮೆಟ್ಟಿಲೇರಿದೆ. ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಇಡಿ ತಕರಾರು ಅರ್ಜಿ ಸಲ್ಲಿಸಿದೆ.

ತಕರಾರು ಅರ್ಜಿಯಲ್ಲಿ ಸಿಎಂ ಹಾಗೂ ಸಿಎಂ ಕುಟುಂಬದ ವಿರುದ್ಧ ಸಾಕಷ್ಟು ಸಾಕ್ಷಿ ಇದೆ. ನಮ್ಮ ತನಿಖೆಯಲ್ಲಿ ಅವರು ತಪ್ಪುಗಳು ಸಾಭೀತಾಗಿದೆ. ಹೀಗಿದ್ದರೂ ಅವರು ಯಾವ ತಪ್ಪು ಮಾಡಿಲ್ಲ ಎಂದು ಹೇಳಿರುವುದು ಸರಿಯಲ್ಲ. ಹೀಗಾಗಿ ಲೋಕಾಯುಕ್ತ ವರದಿಯನ್ನ ತಿರಸ್ಕರಿಸಿ ಎಂದು ಇಡಿ ಒಟ್ಟು 8 ಪುಟಗಳ ತಕರಾರು ಅರ್ಜಿ ಸಲ್ಲಿಕೆ ಮಾಡಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯ ಜವಾಬ್ದಾರಿಯನ್ನ ಮೈಸೂರು ಲೋಕಾಯುಕ್ತರಿಗೆ ವಹಿಸಲಾಗಿತ್ತು. ಸಿಎಂ  ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಿದ್ದರು. ವರದಿಯಲ್ಲಿ ಸಿದ್ದರಾಮಯ್ಯಗೆ ಕ್ಲೀನ್ ಚಿಟ್ ನೀಡಲಾಗಿತ್ತು.

Key words: Muda case, ED, petition, reject, Lokayukta, report