ಬೆಂಗಳೂರು,ಏಪ್ರಿಲ್,15,2025 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಬಿ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ತೀರ್ಪನ್ನು ಇಂದು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕಟಿಸಲಿದೆ.
ಮುಡಾ ಹಗರಣ ಪ್ರಕರಣ ಸಂಬಂಧ ಇಡಿ ಮೇಲ್ಮನವಿ ಕುರಿತು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ನ್ಯಾಯಾಧೀಶರಾದ ಗಜಾನನ ಭಟ್ ಅಂತಿಮ ತೀರ್ಪು ನೀಡಲಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬದ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಕುಟುಂಬಕ್ಕೆ ಲೋಕಾಯುಕ್ತ ಕ್ಲೀನ್ ಚೀಟ್ ನೀಡಿದ್ದನ್ನ ಪ್ರಶ್ನಿಸಿ ಏಪ್ರಿಲ್ 2 ರಂದು ಇಡಿ ತಕರಾರು ಅರ್ಜಿ ಸಲ್ಲಿಸಿತ್ತು. ಕಳೆದ ಬುಧವಾರ ನ್ಯಾಯಾಧೀಶರು ಇಡಿ ಮತ್ತು ಲೋಕಾಯುಕ್ತಾ ವಕೀಲರ ವಾದ ವಿವಾದ ಆಲಿಸಿ ಇಂದಿಗೆ ತೀರ್ಪುನ್ನ ಕಾಯ್ದಿರಿಸಿದ್ದರು.
ಒಂದು ವೇಳೆ ಲೋಕಾಯುಕ್ತಾ ವರದಿ ನ್ಯಾಯಾಲಯ ಎತ್ತಿ ಹಿಡಿದರೆ ಸಿಎಂ ಸಿದ್ದರಾಮಯ್ಯಗೆ ದೊಡ್ಡ ಗೆಲುವು ಆಗಲಿದೆ. ಬಿ ರಿಪೋರ್ಟ್ ತಿರಸ್ಕರಿಸಿದರೆ ಸಿಎಂ ಸಿದ್ದರಾಮಯ್ಯಗೆ ಮತ್ತಷ್ಟು ಸಂಕಷ್ಟ ಎದುರಾಗಲಿದೆ.
ವಿಚಾರಣೆ ವೇಳೆ ಲೋಕಾಯುಕ್ತ ಪರ ವಕೀಲ ವೆಂಕಟೇಶ್, ಇಡಿ ಪರ ಮಧುಕರ್ ದೇಶಪಾಂಡೆ ವಾದ ಮಂಡಿಸಿದ್ದರು. ಕೋರ್ಟ್ ಗೆ ಜಾರಿ ನಿರ್ದೇಶನಾಲಯ ಸುಮಾರು 27 ದಾಖಲೆಗಳನ್ನು ಒದಗಿಸಿದೆ. ಆರ್ ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇಡಿಗೆ ಪೂರಕ ದಾಖಲೆಗಳನ್ನು ನೀಡಿದ್ದರು. ಇದೀಗ ಅಂತಿಮ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದ್ದು ಸಿಎಂ ಸಿದ್ದರಾಮಯ್ಯ ರಾಜಕೀಯ ಭವಿಷ್ಯಕ್ಕೆ ಮಹತ್ವದ ತೀರ್ಪು ಇದಾಗಿದೆ.
Key words: Muda Case, Final verdict, ED, appeal, challenging, B report