ಮುಡಾ ಪ್ರಕರಣ ಸಿಬಿಐ ತನಿಖೆಗೆ ಕೋರಿ ಅರ್ಜಿ: ಜ.15ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು,ಡಿಸೆಂಬರ್,19,2024 (www.justkannada.in):  ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಜನವರಿ 15ಕ್ಕೆ ಮುಂದೂಡಿಕೆ ಮಾಡಿದೆ.

ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ಇಂದು ಅರ್ಜಿಯ ವಿಚಾರಣೆ ನಡೆಯಿತು. ಬಳಿಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, 2025 ಜನವರಿ 15ಕ್ಕೆ ಮುಂದೂಡಿದರು.

ವಿಚಾರಣೆ ಆರಂಭವಾದ ಬಳಿಕ ಎಲ್ಲಾ ಪ್ರತಿವಾದಿಗಳಿಗೂ ನೋಟಿಸ್ ಜಾರಿಯಾಗಿದೆ ಎಂದು ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಕೆ ಜಿ ರಾಘವನ್ ಅವರು ವಾದ ಮಂಡಿಸಿದರು. ಹೈ ಕೋರ್ಟ್ ಎದುರಿನ ಬಿಲ್ಡಿಂಗ್ ನೋಟಿಸ್ ಜಾರಿಯಾಗಲು 35 ದಿನ ಸಮಯ ತಗುಲಿರುವುದು ಶಾಕಿಂಗ್ ವಿಚಾರ ಎಂದು ಇದೇ ವೇಳೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಅಭಿಪ್ರಾಯಿಸಿತು.

ಲೋಕಾಯುಕ್ತ  ಪೊಲೀಸರು ಡಿಸೆಂಬರ್ 24ರೊಳಗೆ ವರದಿ ಸಲ್ಲಿಸಬೇಕಿತ್ತು. ಆದರೆ ಈಗ ಆ ಅವಧಿಯನ್ನ ಜನವರಿ  28ಕ್ಕೆ ವಿಸ್ತರಣೆ ಮಾಡಿದೆ. ಅಲ್ಲದೆ ಲೋಕಾಯುಕ್ತ ಪೊಲೀಸರ ತನಿಖೆಯೆ ಯಾವುದೇ ತಡೆ ಇಲ್ಲ ಎಂದು ನ್ಯಾಯಪೀಠ ಹೇಳಿದ್ದು ವಿಚಾರಣೆಯನ್ನ ಜನವರಿ 15ಕ್ಕೆ ಮುಂದೂಡಿಕೆ ಮಾಡಿದೆ.

Key words: CBI probe, Muda case,  High Court, hearing