ಮೂಡಾದಲ್ಲಿ ಎರಡೂವರೆ ಸಾವಿರ ಕೋಟಿ ರೂ. ಅವ್ಯವಹಾರ: ರಘು ಕೌಟಿಲ್ಯ ಗಂಭೀರ ಆರೋಪ

ಮೈಸೂರು,ಜೂನ್,29,2024 (www.justkannada.in): ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಎರಡೂವರೆ ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು  ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಗಂಭೀರ ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಕೌಟಿಲ್ಯ,  ಮೂಡಾದಲ್ಲಿ ಎರಡೂವರೆ ಸಾವಿರ ಕೋಟಿಗೂ ಹೆಚ್ಚು ಅವ್ಯವಹಾರ ನಡೆದಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮಗಿಂತಲೂ ಮೂಡಾದಲ್ಲಿ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರವೂ ಇದು ಮುಂದುವರೆದಿದೆ. ಈ ಅವ್ಯವಹಾರದ ತನಿಖೆ ನ್ಯಾಯಯುತವಾಗಿ ನಡೆಯಲು ಪ್ರಭಾವಿಗಳು ಬಿಡುತ್ತಿಲ್ಲ. ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ರಾಜೀನಾಮೆ ಪಡೆಯಬೇಕು. ಮೂಡಾದಲ್ಲಿ ಆಗಿರುವ ಅವ್ಯವಹಾರ ಬಯಲಿಗೆಳೆಯಲು ಎಸ್ ಐಟಿ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿದರು.

ಮೂಡಾ ಆಸ್ತಿ ಮತ್ತು ನಿವೇಶನಗಳು ಉಳಿಯಬೇಕಾದರೆ ಜಿಲ್ಲಾಧಿಕಾರಿಗಳ ಸುಪರ್ದಿಗೆ ಇದನ್ನ ವಹಿಸಬೇಕು. ಹಲವು ವರ್ಷಗಳಿಂದ ಮೈಸೂರಿನ ಜನತೆಗೆ ಮೂಡಾ ನಿವೇಶನ ಹಂಚಿಕೆ ಮಾಡಿಲ್ಲ. ಒಂದೇ ಒಂದು ನಿವೇಶನ ಹಂಚಿಕೆ ಮಾಡಲಾಗದ ಮೂಡಾ ಯಾಕೆ ಬೇಕು ಎಂದು ರಘು ಕೌಟಿಲ್ಯ ಕಿಡಿಕಾರಿದ್ದಾರೆ.

Key words: Muda, Corruption, Raghu Kautilya, allegation