ಮೈಸೂರು,ಅಕ್ಟೋಬರ್,18,2024 (www.justkannada.in): ಮುಡಾ ಅಕ್ರಮ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಇಂದು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.
ಸುಮಾರು 20 ಮಂದಿ ಇಡಿ ಅಧಿಕಾರಿಗಳು ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಹಲವು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ದೂರು ಹಿನ್ನೆಲೆಯಲ್ಲಿ ಇಂದು ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಮುಡಾದಲ್ಲಿ 5 ಸಾವಿರ ಕೋಟಿ ರೂಪಾಯಿ ಅಕ್ರಮ ನಡೆದಿದೆ. ಸಿಎಂ ಅಧಿಕಾರ ದುರುಪಯೋಗ ಪಡಿಸಿ ಕೊಂಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಈ ಸಂಬಂಧ ಇದೀಗ ದಾಳಿಯಾಗಿದೆ.
ಇನ್ನು ಭೂಮಾಲೀಕ ಮುಡಾ ಪ್ರಕರಣ 4ನೇ ಆರೋಪಿ ದೇವರಾಜು ಅವರ ಕೇಂಗೇರಿ ನಿವಾಸದ ಮೇಲೂ ಇಡಿ ಅಧಿಕಾರಿಗಳು ರೇಡ್ ನಡೆಸಿದ್ದಾರೆ ಎನ್ನಲಾಗಿದೆ.
ಮುಡಾಗೆ ಪೊಲೀಸ್ ಬಿಗಿ ಭದ್ರತೆ
ಇಡಿ ದಾಳಿ ಹಿನ್ನೆಲೆಯಲ್ಲಿ ಮೈಸೂರು ಮುಡಾ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಇಡಿ ಅಧಿಕಾರಿಗಳ ಜೊತೆ ಸಿಆರ್ ಪಿಎಫ್ ಯೋಧರು ಆಗಮಿಸಿದ್ದು, ಇಪ್ಪತ್ತಕ್ಕೂ ಹೆಚ್ಚು ಸೆಕ್ಯುರಿಟಿ ಫೋರ್ಸ್ ಅಧಿಕಾರಿಗಳು, ಸಿಆರ್ ಪಿಎಫ್ ಅಧಿಕಾರಿಗಳಿಗೆ ಸ್ಥಳೀಯ ಪೊಲೀಸರು ಸಾಥ್ ನೀಡಿದ್ದಾರೆ.
ಮುಡಾ ಕಚೇರಿಗೆ ಯಾರೂ ಬರದಂತೆ ಅಧಿಕಾರಿಗಳು ತಡೆಯುತ್ತಿದ್ದು, ಸಾರ್ವಜನಿಕ ಸೇವೆಗೂ ಕೂಡ ಮುಡಾ ಅಲಭ್ಯವಾಗಿದೆ. ಮುಡಾದ ಅಧ್ಯಕ್ಷ ಹಾಗೂ ಕಾರ್ಯದರ್ಶಿ ಕಚೇರಿಯಲ್ಲಿ ಇಡಿ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ.
Key words: Muda office, raid, ED officials