ಬೆಂಗಳೂರು,ಅಕ್ಟೋಬರ್, 16,2024 (www.justkannada.in): ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ಹಗರಣ ಸಂಬಂಧ ಮುಡಾ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ನಗರಾಭಿವೃದ್ಧಿ ಕಾರ್ಯದರ್ಶಿ ದೀಪಾ ಚೋಳನ್ ಗೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರೀಗೌಡ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಮುಡಾ ಹಗರಣದಲ್ಲಿ ಅಕ್ರಮ ಆರೋಪದಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿತ್ತು. ಈ ಮಧ್ಯೆ ರಾಜೀನಾಮೆ ನೀಡುವಂತೆ ಕೆ.ಮರೀಗೌಡ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು.
ಮುಡಾಗೆ ಹೊಸ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಮುಡಾ ಅಧ್ಯಕ್ಷ ಕೆ. ಮರಿಗೌಡ ರಾಜೀನಾಮೆ ಸಲ್ಲಿಸಿದ್ದಾರೆ. ಮುಡಾ ನಿವೇಶನ ಹಂಚಿಕೆ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರಿಗೆ ತೀವ್ರ ಸಂಕಷ್ಟ ತಂದ ಹಿನ್ನೆಲೆಯಲ್ಲಿ ಮುಡಾಗೆ ಮೇಜರ್ ಸರ್ಜರಿ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಇನ್ನು ರಾಜೀನಾಮೆ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ಮುಡಾ ಅಧ್ಯಕ್ಷ ಮರೀಗೌಡ ತಿಳಿಸಿದ್ದಾರೆ.
Key words: Muda president, K.Mari Gowda, resignation