MYSORE MUDA SCAM: ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆ.!

Plea seeking CBI enquiry to be to be heard tomorrow.

 

ಮೈಸೂರು, ನ.04,2024: (www.justkannada.in news) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ  ನಿವೇಶನಗಳ ಅಕ್ರಮ ಹಂಚಿಕೆಗೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆ ನಡೆಯಲಿದೆ.

ಮುಡಾ ಪ್ರಕರಣವನ್ನು ಸಿ.ಬಿ.ಐ.ಗೆ ಕೊಡಬೇಕೆಂದು ಆರ್.ಟಿ.ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ  ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಉಚ್ಚ ನ್ಯಾಯಾಲಯದಲ್ಲಿ ನಾಳೆಗೆ ದಿನಾಂಕ ನಿಗಧಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಡಾ ಪ್ರಕರಣ ಇದೀಗ ಮತ್ತಷ್ಟು ಕುತೂಹಲ ಮೂಡಿಸಿದೆ.

ಈ ತನಕ ಲೋಕಾಯುಕ್ತ, ಜಾರಿ ನಿರ್ದೇಶನಾಲಯ ಹಾಗೂ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಪ್ರತ್ಯೇಕವಾಗಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ಸಿಬಿಐಗೆ ಪ್ರಕರಣವನ್ನು ಒಪ್ಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಕೈಗೆತ್ತಿಕೊಂಡಿರುವುದು ಈಗ ಮತ್ತಷ್ಟು ಕುತೂಹಲಕ್ಕೆ ಎಡೆಮಾಡಿದೆ.

ನನಗೆ ಮೊದಲಿನಿಂದಲೂ ಕೂಡ ಲೋಕಾಯುಕ್ತದ ಮೇಲೆ ನಂಬಿಕೆ ಇಲ್ಲ ಪ್ರಕರಣವನ್ನ ಸಿಬಿಐಗೆ ವಹಿಸುವಂತೆ ನಾನು ಅರ್ಜಿ ಸಲ್ಲಿಸಿರುವೆ. ನ್ಯಾಯಾಲಯದಲ್ಲಿ ನಾಳೆ ಪ್ರಕರಣ ಬರಲಿದೆ.  ವಾರದೊಳಗೆ ಸಿಬಿಐಗೆ ವಹಿಸಬಹುದು ಎಂದು ಅರ್ಜಿದಾರ ಸ್ನೇಹಮಯಿ ಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.

KEY WORDS: Plea seeking, CBI enquiry, to be to be heard tomorrow, high court, karnataka, MUDA scam

Plea seeking CBI enquiry to be to be heard tomorrow.