ಮುಡಾ ಹಗರಣ : ಹೈಕೋರ್ಟ್’ಗೆ ತನಿಖಾ ವರದಿ ಸಲ್ಲಿಸಿದ ಲೋಕಾಯಕ್ತ ಪೊಲೀಸರು

ಬೆಂಗಳೂರು,ಜನವರಿ,27,2025 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯಕ್ತ ಪೊಲೀಸರು ಇಂದು  ಹೈಕೋರ್ಟ್ ಗೆ ತನಿಖೆಯ ವರದಿ ಸಲ್ಲಿಕೆ ಮಾಡಿದ್ದಾರೆ.

ಮುಡಾ ಹಗರಣವನ್ನ ಸಿಬಿಐ ತನಿಖೆಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಲ್ಲಿ ನಡೆಯುತ್ತಿದೆ. ಈ ಮಧ್ಯೆ ಲೋಕಾಯಕ್ತ ಎಸ್ ಪಿ ಉದೇಶ್ ಅವರು ತನಿಖೆಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ಗೆ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಸ್ನೇಹಮಯಿ ಕೃಷ್ಣ ಅವರ ಪರ ಹಿರಿಯ ವಕೀಲ ಮಣಿಂದರ್ ಸಿಂಗ್ ವಾದ ಮಂಡಿಸಿದ್ದು, ನ್ಯಾಯ ಎತ್ತಿ ಹಿಡಿಯಲು ಸಿಬಿಐ ತನಿಖೆ ಅನಿವಾರ್ಯ . ಹೀಗಾಗಿ ಪ್ರಕರಣ ಸಿಬಿಐ ತನಿಖೆಗೆ ನೀಡಿ ಎಂದು ಮನವಿ ಮಾಡಿದ್ದಾರೆ.

Key words: Muda scam, Lokayukta police, investigation report, High Court