ಮುಡಾದಲ್ಲಿ ಯಾವುದೇ ಲೋಪವಿಲ್ಲ: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಬಿಜೆಪಿ ಯತ್ನ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಜುಲೈ,12,2024 (www.justkannada.in):  ಮುಡಾದಲ್ಲಿ ಸೈಟ್ ಹಂಚಿಕೆಯಲ್ಲಿ ಯಾವುದೇ ಲೋಪವಾಗಿಲ್ಲ. ಆದರೂ ಸಹ ಬಿಜೆಪಿ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿಕಾರಿದರು.

ಮುಡಾ ಹಗರಣ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಬಿಜೆಪಿ ರಾಜಕೀಯ ಕಾರಣಕ್ಕೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಅದಕ್ಕೆ ಕಾಂಗ್ರೆಸ್‌‍ ರಾಜಕೀಯವಾಗಿಯೇ ತಿರುಗೇಟು ನೀಡುತ್ತದೆ  ದೇಶದಲ್ಲೇ ದೊಡ್ಡ ರಾಜ್ಯಗಳ ಪೈಕಿ ಕಾಂಗ್ರೆಸ್ ಅಧಿಕಾರದಲ್ಲಿರುವುದು ಕರ್ನಾಟಕದಲ್ಲಿ ಮಾತ್ರ. ಅದಕ್ಕಾಗಿ ಇಲ್ಲಿ ನಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ಅವಕಾಶ ನೀಡುವುದಿಲ್ಲ ಎಂದರು.

ವಾಲ್ಮೀಕಿ ಅಭಿವೃದ್ದಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರ ತನಿಖೆ ನಡೆಸುತ್ತಿದ್ದು,  ಇಡಿ ವಿಚಾರಣೆ ಅಗತ್ಯವಿರಲಿಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಶಿವಕುಮಾರ್,  ಈ ಕುರಿತು ಈಗಾಗಲೇ ಕಾನೂನು ತಜ್ಞರ ಜೊತೆ ಚರ್ಚೆ ನಡೆಸಲಾಗಿದ್ದು, ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮತ್ತೊಂದು ಸುತ್ತಿನ ಸಭೆ  ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

Key words: Muda scam, BJP, protest, DCM, DK Shivakumar