ಮುಡಾ ಹಗರಣ: ಬಿ ರಿಪೋರ್ಟ್ ಸಂಬಂಧ ತೀರ್ಪು ಕಾಯ್ದಿರಿಸಿದ ಕೋರ್ಟ್

ಬೆಂಗಳೂರು,ಏಪ್ರಿಲ್,9,2025 (www.justkannada.in):  ಸಿಎಂ ಸಿದ್ದರಾಮಯ್ಯ ವಿರುದ್ದದ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ  ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪನ್ನು ಏಪ್ರಿಲ್ 15ಕ್ಕೆ ಕಾಯ್ದಿರಿಸಿದೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ಕೋರ್ಟ್ ಗೆ ಲೋಕಾಯುಕ್ತದಿಂದ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಇದನ್ನು ಪ್ರಶ್ನಿಸಿ ಇಡಿ ಅರ್ಜಿ ಸಲ್ಲಿಕೆ ಮಾಡಿತ್ತು. ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.

ಈ ವೇಳೆ ಇಡಿ ಹಾಗೂ ಸಿಎಂ ಪರ ವಕೀಲರ ವಾದ ಪ್ರತಿವಾದವನ್ನು ಆಲಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು, ಆದೇಶವನ್ನು ಏಪ್ರಿಲ್ 15ಕ್ಕೆ ಕಾಯ್ದಿರಿಸಿದೆ.

ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯವು ಮುಚ್ಚಿದ ಲಕೋಟೆಯಲ್ಲಿ 27 ದಾಖಲೆಯನ್ನು ಸಲ್ಲಿಕೆ ಮಾಡಿದೆ. ಇಡಿ ಪರ ವಕೀಲ ಮಧುಕರ್ ದೇಶಪಾಂಡೆ  ವಾದ ಮಂಡಿಸಿದ್ದರು.

Key words: Muda scam, Court, reserves, verdict, B report