ಬೆಂಗಳೂರು, ಮಾರ್ಚ್ 15, 2021 (www.justkannada.in):
ಉತ್ತರ ಪ್ರದೇಶವನ್ನು 6 ವಿಕೆಟ್ಗಳಿಂದ ಬಗ್ಗುಬಡಿದ ಮುಂಬೈ 2021ರ ವಿಜಯ್ ಹಜಾರೆ ಟ್ರೋಫಿಯನ್ನು ಎತ್ತಿಹಿಡಿದಿದೆ.
ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಉತ್ತರ ಪ್ರದೇಶ, 50 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 312 ರನ್ ಗಳಿಸಿತ್ತು.
ಈ ಮೂಲಕ ಮುಂಬೈ ತಂಡ 4ನೇ ಬಾರಿ ವಿಜಯ್ ಹಜಾರೆ ಟ್ರೋಫಿಯನ್ನು ಗೆಲ್ಲುವ ಮೂಲಕ ಅತಿ ಹೆಚ್ಚು ಬಾರಿ ಈ ಟೂರ್ನಿಯನ್ನು ಗೆದ್ದ 2ನೇ ತಂಡ ಎಂಬ ದಾಖಲೆಯನ್ನು ಕರ್ನಾಟಕದ ಜೊತೆ ಹಂಚಿಕೊಂಡಿದೆ.
ತಮಿಳುನಾಡು ತಂಡ 5 ಬಾರಿ ಗೆಲ್ಲುವ ಮೂಲಕ ಅಗ್ರಸ್ಥಾನದಲ್ಲಿದೆ.