ಮಂಡ್ಯ,ಸೆಪ್ಟಂಬರ್, 11,2020(www.justkannada.in): ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ದರೋಡೆಕೋರು ದೇವಸ್ಥಾನದ ಹುಂಡಿ ದೋಚಿ ನಂತರ ಅಲ್ಲಿ ಮಲಗಿದ್ದ ಮೂವರ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿದ್ದು, ಪ್ರಕರಣ ಸಂಬಂಧ ಆರೋಪಿಗಳನ್ನ ಬಂಧಿಸುವಂತೆ ಪೊಲೀಸರಿಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ ಸೂಚನೆ ನೀಡಿದರು.
ಘಟನೆ ನಡೆದ ಅರ್ಕೇಶ್ವರ ದೇವಾಲಯದ ಸ್ಥಳಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಭೇಟಿ ನೀಡಿ ಪರಿಶೀಲಿಸಿದರು. ಘಟನೆ ಸಂಬಂಧ ಜಿಲ್ಲಾ ಪೊಲಿಸ್ ವರಿಷ್ಟಾಧಿಕಾರಿ ಜೊತೆ ಮಾತನಾಡಿದ ಸಚಿವ ನಾರಾಯಣಗೌಡ, ಘಟನೆಗೆ ಕಾರಣರಾದವರನ್ನ ತಕ್ಷಣ ಬಂಧಿಸುವಂತೆ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಘಟನೆ ಬಗ್ಗೆ ಸಚಿವ ನಾರಾಯಣಗೌಡ ಮಾಹಿತಿ ನೀಡಿದ್ದಾರೆ. ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರ್ ಅವರ ಬಳಿಯೂ ಚರ್ಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವುದಾಗಿಯೂ ಸರ್ಕಾರ ಘೋಷಿಸಿದೆ.
Key words: Murder – three – temple-Minister -Dr. Narayana Gowda –visit-place